ADVERTISEMENT

ಅಪೌಷ್ಟಿಕತೆ ನಿವಾರಣೆ: ಗಂಭೀರ ಪ್ರಯತ್ನ ಬೇಕು

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2020, 19:31 IST
Last Updated 24 ಡಿಸೆಂಬರ್ 2020, 19:31 IST

ರಾಜ್ಯದ ಅಂಗನವಾಡಿ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಾಗಿರುವುದನ್ನು ತಿಳಿದು (ಪ್ರ.ವಾ., ಡಿ. 21) ತುಂಬಾ ಬೇಸರವಾಯಿತು. ರಾಜ್ಯದಲ್ಲಿ ಅಪೌಷ್ಟಿಕತೆ ತಾಂಡವವಾಡುತ್ತಿದೆ. ಅದರಲ್ಲೂ ವಿಶೇಷವಾಗಿ ಬೆಳೆಯುವ ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಈ ಬಾಧೆ ಹೆಚ್ಚು.

ಇದನ್ನು ಹೋಗಲಾಡಿಸಲು ಸರ್ಕಾರ ಯೋಜನೆಗಳನ್ನು ರೂಪಿಸಿದೆ. ಆದರೆ ಅವುಗಳ ಪರಿಣಾಮ ನಿರೀಕ್ಷಿತ ಮಟ್ಟದಲ್ಲಿ ಆಗುತ್ತಿಲ್ಲ.ಅಪೌಷ್ಟಿಕತೆಯನ್ನು ಹೋಗಲಾಡಿಸಲು ಇನ್ನೂ ಗಂಭೀರವಾದ ಪ್ರಯತ್ನ ಬೇಕು. ಈಗ ಕೊರೊನಾದ ಸಂದರ್ಭದಲ್ಲಿ ಅಪೌಷ್ಟಿಕತೆಯಿಂದ ಬಳಲುವವರ ಪ್ರಮಾಣ ಹೆಚ್ಚಾಗಿರುವುದು ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ‌

ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಈ ಸಮಸ್ಯೆ ಹೆಚ್ಚಾಗಿದೆ. ಇದಕ್ಕೆ ಈ ಭಾಗದ ಜನಪ್ರತಿನಿಧಿಗಳು, ಸಂಬಂಧಿಸಿದ ಇಲಾಖೆ ಮತ್ತು ಅಧಿಕಾರಿಗಳೇ ನೇರ ಹೊಣೆ. ಯೋಜನೆಗಳನ್ನು ಕಾಟಾಚಾರಕ್ಕೆ ಎಂಬಂತೆ ಅನುಷ್ಠಾನ ಮಾಡುವುದರಿಂದ ಪ್ರಯೋಜನವಿಲ್ಲ. ಬದ್ಧತೆ ಮತ್ತು ಇಚ್ಛಾಶಕ್ತಿ ಅಗತ್ಯ.

ADVERTISEMENT

ಅಪೌಷ್ಟಿಕತೆಯನ್ನು ನಿವಾರಿಸಲು ಹೆಚ್ಚಿನ ಅನುದಾನ, ಅದರ ಸದ್ಬಳಕೆಗೆ ವಿಶೇಷ ಕಾಳಜಿ ಬೇಕು. ಯೋಜನೆಗಳ ಪರಿಣಾಮಕಾರಿ ಜಾರಿ ಜೊತೆಗೆ ಜನಜಾಗೃತಿಯ ಆಗತ್ಯವೂ ಇದೆ. ಜವಾಬ್ದಾರಿ ಇರುವ ಪ್ರತಿಯೊಬ್ಬರೂ ಈ ಬಗ್ಗೆ ಆಲೋಚಿಸಿ ನಮ್ಮ ಮಕ್ಕಳು ಮತ್ತು ಮಹಿಳೆಯರ ಉಳಿವಿಗಾಗಿ ಶ್ರಮಿಸಿ, ಅಪೌಷ್ಟಿಕತೆಯನ್ನು ದೂರ ಮಾಡಬೇಕಾಗಿದೆ.
-ಶಿವಕುಮಾರ ಮ್ಯಾಗಳಮನಿ, ಕವಿತಾಳ, ರಾಯಚೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.