ADVERTISEMENT

ಪ್ರಶ್ನಿಸಿದ ಮಾತ್ರಕ್ಕೆ ಜವಾಬ್ದಾರಿ ಮುಗಿಯದು

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 4 ಏಪ್ರಿಲ್ 2022, 19:31 IST
Last Updated 4 ಏಪ್ರಿಲ್ 2022, 19:31 IST

ಅಗತ್ಯ ವಸ್ತುಗಳ ಬೆಲೆ ಏರಿಕೆ ಮರೆಮಾಚಲು ಬಿಜೆಪಿಯು ಕೋಮುವಾದದ ವಿಷಬೀಜವನ್ನು ಬಿತ್ತುತ್ತಿದೆ ಎಂದಿದ್ದಾರೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ. ಹಾಗೆಯೇ ಸತತವಾಗಿ ಬೆಲೆ ಏರಿಕೆ ಆಗುತ್ತಿದ್ದರೂ ಬಿಜೆಪಿ ಮೌನ ವಹಿಸಿರುವುದೇಕೆ ಎಂದು ಪ್ರಶ್ನಿಸಿದ್ದಾರೆ ಜೆಡಿಎಸ್ ನಾಯಕ ಎಚ್‌.ಡಿ.ಕುಮಾರಸ್ವಾಮಿ (ಪ್ರ.ವಾ., ಏ. 4). ಹಿಂದೆ ಖಾಲಿ ಸಿಲಿಂಡರ್ ಹೊತ್ತು ಬೀದಿಯಲ್ಲಿ ಪ್ರತಿಭಟಿಸಿದ್ದ ಬಿಜೆಪಿ ಈಗಲೂ ಹಾಗೇ ಮಾಡಲಿ ಎಂದು ಅವರು ಸವಾಲು ಹಾಕಿದ್ದಾರೆ.

ಸರಿಯೇ. ಆದರೆ ಈ ರೀತಿ ಬರೀ ಪ್ರಶ್ನಿಸಿದರೆ ಅಥವಾ ಸವಾಲು ಹಾಕಿದರೆ ಅಲ್ಲಿಗೆ ಇವರ ಜವಾಬ್ದಾರಿ ಮುಗಿಯಿತೇ? ಇವರು ಕೂಡ ಬೀದಿಗಿಳಿದು ಬೆಲೆ ಏರಿಕೆ ವಿರುದ್ಧ ಜನಪರವಾಗಿ ಹೋರಾಡಬೇಕು ತಾನೆ? ಆ ಕೆಲಸ ಆಗುತ್ತಿಲ್ಲ. ಇದರಿಂದಾಗಿ ಜನಸಾಮಾನ್ಯರಿಗೆ ಇವರ ಮೇಲೆ ವಿಶ್ವಾಸವೇ ಇಲ್ಲದಂತಾಗಿದೆ. ಬಿಜೆಪಿ ಈಗಾಗಲೇ ಬೂತ್ ಮಟ್ಟದಲ್ಲಿ ಚುನಾವಣಾ ತಯಾರಿ ನಡೆಸಿರುವಾಗ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಬರೀ ಹೇಳಿಕೆ ನೀಡುತ್ತಾ ಕಾಲಹರಣ ಮಾಡುತ್ತಿವೆ. ಹೀಗಾಗಿ, ಆಳುವ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಸುತ್ತಲೇ ಇದೆ. ಬಡವರ ಗೋಳನ್ನು ಕೇಳುವವರೇ ಇಲ್ಲದಂತಾಗಿದೆ.

- ಹುರುಕಡ್ಲಿ ಶಿವಕುಮಾರ,ಬಾಚಿಗೊಂಡನಹಳ್ಳಿ, ಹಗರಿಬೊಮ್ಮನಹಳ್ಳಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.