ADVERTISEMENT

ನೇಮಕಾತಿಯಲ್ಲಿ ಭ್ರಷ್ಟಾಚಾರ: ಸಮಾಜಘಾತುಕ ಕೃತ್ಯ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 6 ಜುಲೈ 2022, 19:18 IST
Last Updated 6 ಜುಲೈ 2022, 19:18 IST

ಪಿಎಸ್ಐ ಪರೀಕ್ಷೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದೆ. ಯಾರು ಎಷ್ಟೇ ಪ್ರಭಾವಿಗಳಾಗಿದ್ದರೂ ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು. ಇನ್ನು ಮುಂದೆ ನಡೆಯುವ ನೇಮಕಾತಿಗಳನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಎಲ್ಲ ಕ್ರಮಗಳನ್ನೂ ಕೈಗೊಳ್ಳಬೇಕು. ಅಕ್ರಮದ ಎಲ್ಲ ಮಾರ್ಗಗಳನ್ನೂ ಮುಚ್ಚಬೇಕು. ಪ್ರತಿಭಾವಂತರಿಗೆ ಅನ್ಯಾಯ ಆಗದ ರೀತಿಯಲ್ಲಿ ಪರೀಕ್ಷೆಗಳನ್ನು ನಡೆಸಲು ಮುಂದಾಗಬೇಕು. ನೇಮಕಾತಿಯಲ್ಲಿ ನಡೆಸುವ ಭ್ರಷ್ಟಾಚಾರವು ಸಮಾಜಘಾತುಕ ಕೆಲಸ. ಅದರ ಪರಿಣಾಮಗಳು ಘೋರವಾಗಿರುತ್ತವೆ. ಇಂತಹ ಕೃತ್ಯಗಳಲ್ಲಿ ತೊಡಗಿದವರಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು. ಪ್ರತಿಭಾವಂತರು ಉದ್ಯೋಗ ಪಡೆಯಲು ಈ ರೀತಿಯ ಅಕ್ರಮಗಳು ತೊಡಕಾಗಬಾರದು.

- ವಿನಯ್ ನಾಗರಾಜ್,ಬಲಶೆಟ್ಟಿಹಾಳ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT