ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಬಗ್ಗೆ ತಾವು ಕೈಗೊಂಡಿರುವುದು ‘ಅಂತಿಮ ನಿರ್ಧಾರವಲ್ಲ, ನಪಾಸ್‌ರಹಿತ ಪ್ರಯೋಗ’ ಎಂದು ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿರುವುದು (ವಾ.ವಾ., ಅ.9) ಸ್ವಾಗತಾರ್ಹ. ಜೊತೆಗೆ ಈ ನಿಲುವು ಗುಣಾತ್ಮಕ ಶಿಕ್ಷಣಕ್ಕೆ ಪೂರಕವಾಗಿದೆ. ಪ್ರಸ್ತುತ ಎಸ್ಎಸ್ಎಲ್‌ಸಿ ಹಾಗೂ ಪಿಯುಸಿವರೆಗಿನ ಶಿಕ್ಷಣದ ಗುಣಮಟ್ಟ ನಿರೀಕ್ಷಿತ ಮಟ್ಟದಲ್ಲಿ ಇಲ್ಲ. ಇದಕ್ಕೆ, ಪ್ರಾಥಮಿಕ ಶಾಲಾ ಹಂತದಲ್ಲಿ ಗುಣಮಟ್ಟದ ಶಿಕ್ಷಣ ದೊರೆಯದಿರುವುದೇ ಕಾರಣ ಎಂಬ ಅಭಿಪ್ರಾಯ ಇದೆ. ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಮೂಲಕ ಈ ಸಮಸ್ಯೆಗೆ ಪರಿಹಾರ ದೊರೆಯುವುದಾದರೆ ಒಳ್ಳೆಯದು.
- ಮಹಾಂತೇಶ್ ಬಿ. ನಿಟ್ಟೂರ್, ದಾವಣಗೆರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.