ADVERTISEMENT

ಗುಣಮಟ್ಟದ ಶಿಕ್ಷಣಕ್ಕೆ ಸಹಕಾರಿ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2021, 20:19 IST
Last Updated 10 ಫೆಬ್ರುವರಿ 2021, 20:19 IST

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ನವ ಭಾರತದ ಹೊಸ ಆಕಾಂಕ್ಷೆಗಳು ಮತ್ತು ಹೊಸ ಅವಕಾಶಗಳನ್ನು ಈಡೇರಿಸುವ ಸಾಧನವಾಗಿದೆ. ಈ ನೀತಿಯಡಿ, ಉತ್ತಮವಾದ ಶೈಕ್ಷಣಿಕ ಗುಣಮಟ್ಟಕ್ಕಾಗಿ ಶಿಕ್ಷಕರ ಆಯ್ಕೆ ಕ್ರಮದಲ್ಲೂ ಬದಲಾವಣೆ ಮಾಡಿರುವುದು ಶಿಕ್ಷಣ ವ್ಯವಸ್ಥೆಯನ್ನು ಶಕ್ತಿಯುತಗೊಳಿಸುವ ಒಂದು ಒಳ್ಳೆಯ ನಿರ್ಧಾರವಾಗಿದೆ.

ಇದೀಗ ಪೂರ್ವ ಪ್ರಾಥಮಿಕ ಹಂತದಿಂದ ಪದವಿಪೂರ್ವ ತರಗತಿಗಳಿಗೆ ಶಿಕ್ಷಕರಾಗಬಯಸುವವರು ಕಡ್ಡಾಯವಾಗಿ ಟಿಇಟಿ ಪರೀಕ್ಷೆ ಪಾಸ್ ಮಾಡಿರಬೇಕಾಗುತ್ತದೆ ಎಂದು‌ ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಷನ್ (ಎನ್‌ಸಿಟಿಇ) ತಿಳಿಸಿದೆ. ಈ ನಿಯಮವು ಶಿಕ್ಷಕರ ನೇಮಕಾತಿಗೆ ಟಿಇಟಿ‌ಯನ್ನು ಕಡ್ಡಾಯ ಮಾಡುವ ಮೂಲಕ ಸಮರ್ಥ ಶಿಕ್ಷಕರ ನೇಮಕಕ್ಕೆ ಒತ್ತು ನೀಡುತ್ತದೆ.⇒

- ವೀರೇಶ ಎಸ್.ಎಸ್.,ಶಿವಪುರ, ಕೂಡ್ಲಿಗಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.