ADVERTISEMENT

ವಾಚಕರ ವಾಣಿ: ಸರ್ಕಾರ, ನ್ಯಾಯಾಂಗದ ಸಂಬಂಧ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2020, 18:28 IST
Last Updated 29 ನವೆಂಬರ್ 2020, 18:28 IST

‘ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ಮಧ್ಯೆ ಸುಮಧುರ ಬಾಂಧವ್ಯ ಇದ್ದಾಗ ಮಾತ್ರ ಪ್ರಜಾಪ್ರಭುತ್ವ ಹೆಚ್ಚು ಕ್ರಿಯಾಶೀಲವಾಗಿರುತ್ತದೆ’ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ (ಪ್ರ.ವಾ., ನ. 26). ಕಳೆದ ವರ್ಷದ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೂ ‘ನ್ಯಾಯಾಂಗ ಮತ್ತು ಕಾರ್ಯಾಂಗದ ನಡುವೆ ಸಹಮತ ಇರಬೇಕು’ ಎಂದು ಹೇಳಿದ್ದು ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಈಗ ಮಹತ್ವದ ಒಂದು ಪ್ರಸಂಗವನ್ನು ಗಮನಿಸಿ: ಕರ್ನಾಟಕದವರೇ ಆದ ನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ ಅವರು 1993ರ ಫೆಬ್ರುವರಿಯಲ್ಲಿ ರಾಷ್ಟ್ರಪತಿ ಭವನದಲ್ಲಿ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರತಿಜ್ಞಾವಿಧಿ ತೆಗೆದುಕೊಂಡ ನಂತರ, ಅಂದಿನ ಪ್ರಧಾನಿ ಪಿ.ವಿ.ನರಸಿಂಹ ರಾವ್ ಅವರು ಸಿಜೆಐ ಉದ್ದೇಶಿಸಿ ಹೇಳಿದ ಮಾತು: ‘ಸುಪ್ರೀಂ ಕೋರ್ಟ್‌ ಮತ್ತು ಸರ್ಕಾರದ ನಡುವೆ ಸೌಹಾರ್ದ ಸಂಬಂಧವನ್ನು ಎದುರು ನೋಡುತ್ತೇನೆ’. ಆ ಕ್ಷಣದಲ್ಲಿ, ನ್ಯಾಯಮೂರ್ತಿ ವೆಂಕಟಾಚಲಯ್ಯನವರ ಪ್ರತಿಕ್ರಿಯೆ ಹೀಗಿತ್ತು: ‘ಮಾನ್ಯ ಪ್ರಧಾನಿಯವರೇ, ನಮ್ಮ ನಿಮ್ಮ ಸಂಬಂಧವು ಸಂವಿಧಾನಕ್ಕೆ ಅನುಗುಣವಾಗಿ ಇರಬೇಕೇ ಹೊರತು ಸೌಹಾರ್ದಯುತವಾಗಿ ಅಲ್ಲ...’.

-ಪ್ರೊ. ಬಿ.ಕೆ.ಚಂದ್ರಶೇಖರ್, ಬೆಂಗಳೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.