ದೇಶದ ಉನ್ನತ ಹುದ್ದೆಗಳಾದ ಐಎಎಸ್, ಐಪಿಎಸ್‌ನಂತಹ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ತಮ್ಮ ರಾಜ್ಯದ ಅಧಿಕೃತ ಭಾಷೆಯಲ್ಲಿ ಪೂರ್ವಭಾವಿ ಪರೀಕ್ಷೆ ಬರೆಯಲು ಅವಕಾಶ ಇಲ್ಲದಿರುವುದು ದುರದೃಷ್ಟಕರ. ಪ್ರತೀ ವರ್ಷ ಅಭ್ಯರ್ಥಿಗಳು ತಮ್ಮ ಅಳಲನ್ನು ತೋಡಿಕೊಂಡು ಪ್ರತಿಭಟಿಸಿದರೂ ಸರ್ಕಾರ ಸ್ಪಂದಿಸದಿರುವುದು ನೋವಿನ ಸಂಗತಿ.
ಭಾಷೆಯ ಸಮಸ್ಯೆಯಿಂದಾಗಿ ಎಷ್ಟೋ ಪ್ರತಿಭಾವಂತ ಅಭ್ಯರ್ಥಿಗಳು ಪೂರ್ವಭಾವಿ ಪರೀಕ್ಷೆ ಬರೆಯಲು ಹಿಂದೇಟು ಹಾಕುತ್ತಾರೆ. ಸರ್ಕಾರ ಈ ತೊಡಕನ್ನು ಕೂಡಲೇ ಸರಿಪಡಿಸಿ, ಆಯಾ ರಾಜ್ಯ ಭಾಷೆಯಲ್ಲಿ ಪೂರ್ವಭಾವಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು.
-ಜೆ.ಚಂದ್ರಶೇಖರ,ದಾವಣಗೆರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.