ADVERTISEMENT

ಬಿಟ್‌ಕಾಯಿನ್‌ ಹಗರಣ: ನಾಯಕರು ಹೊಣೆಯರಿಯಲಿ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2021, 15:16 IST
Last Updated 16 ನವೆಂಬರ್ 2021, 15:16 IST

ಪ್ರಸ್ತುತ ಬಿಟ್‌ಕಾಯಿನ್ ಹ್ಯಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ- ಕಾಂಗ್ರೆಸ್ ನಡುವೆ ದಿನೇ ದಿನೇ ನಡೆಯುತ್ತಿರುವ ವಾಕ್ಸಮರ ರಾಜ್ಯದ ಜನರ ಗಮನ ಸೆಳೆಯುತ್ತಿದೆ. ಇನ್ನು ಚಿಕ್ಕ ವಯಸ್ಸಿನ ವಂಚಕ ಶ್ರೀಕೃಷ್ಣ ಸರ್ಕಾರಿ ಸಂಸ್ಥೆಗಳ ವೆಬ್‌ಸೈಟ್‌ಗಳಿಗೆ ಕನ್ನ ಹಾಕಿ ಸಾವಿರಾರು ಕೋಟಿ ರೂಪಾಯಿ ವಂಚನೆ ಮಾಡಿರುವುದು ಆಶ್ಚರ್ಯದ ಸಂಗತಿ. ಆದರೆ ಸರ್ಕಾರ ಹಾಗೂ ಆಡಳಿತಾರೂಢ ಬಿಜೆಪಿ ನಾಯಕರು ಹ್ಯಾಕರ್‌ನಿಂದ ಸರ್ಕಾರ ಮತ್ತು ಸಾರ್ವಜನಿಕರಿಗೆ ಆದ ನಷ್ಟಕ್ಕೆ ನ್ಯಾಯ ಒದಗಿಸುವ ಪ್ರಯತ್ನ ಮಾಡುವ ಬದಲು, ಸರ್ಕಾರದ ಮೇಲೆ ಗಂಭೀರ ಆರೋಪ ಮಾಡುತ್ತಿರುವ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕರ ಮೇಲೆ ತಿರುಗಿ ಬೀಳುತ್ತಿರುವುದು ಹಾಸ್ಯಾಸ್ಪದ ಸಂಗತಿ.

ಮತ್ತೊಂದೆಡೆ, ಆರೋಪಿ ಶ್ರೀಕೃಷ್ಣನನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ. ಇದರಿಂದ ರಾಜ್ಯದ ರಾಜಕೀಯ ವ್ಯವಸ್ಥೆ ಎಷ್ಟು ಅಧೋಗತಿಗೆ ಇಳಿದಿದೆ ಎಂದು ತಿಳಿಯುತ್ತದೆ. ಶ್ರೀಕೃಷ್ಣನ ಜೀವಕ್ಕೆ ಆಪತ್ತು ಇರುವುದರಿಂದ ಆತನಿಗೆ ಭದ್ರತೆ ಒದಗಿಸಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿರುವುದು ವಿಪರ್ಯಾಸ. ವಂಚನೆ ಆರೋಪ ಹೊತ್ತವರಿಗೆಲ್ಲಾ ಭದ್ರತೆ ಒದಗಿಸುವುದರಿಂದ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತ ಹಾಗೂ ವಿರೋಧ ಪಕ್ಷಗಳ ನಾಯಕರು ಜವಾಬ್ದಾರಿ ಮೆರೆಯಲಿ.

ಶ್ರೀಧರ್ ಡಿ. ರಾಮಚಂದ್ರಪ್ಪ,ತುರುವನೂರು, ಚಿತ್ರದುರ್ಗ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.