ADVERTISEMENT

ವಾಚಕರ ವಾಣಿ | ಸ್ಮಶಾನಕ್ಕೆ ಇಲ್ಲ ಜಾಗ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 23 ಡಿಸೆಂಬರ್ 2022, 22:15 IST
Last Updated 23 ಡಿಸೆಂಬರ್ 2022, 22:15 IST

ಪ್ರತೀ ಗ್ರಾಮ ಪಂಚಾಯಿತಿಯಲ್ಲೂ ಸ್ಮಶಾನಕ್ಕೆ ಜಾಗ ಮೀಸಲಿಡುವಂತೆಯೂ, ಆ ಜಾಗ ಯಾರಿಂದಲಾದರೂ ಒತ್ತುವರಿಯಾಗಿದ್ದರೆ ಅದನ್ನು ತಕ್ಷಣ ಖುಲ್ಲಾ ಮಾಡಿಸುವಂತೆಯೂ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಆದರೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಜಯಪುರ ನಾಡಕಚೇರಿ ಎದುರು ಶವಸಂಸ್ಕಾರಕ್ಕೆ ಸ್ಮಶಾನ ಇಲ್ಲ ಎಂದು ಆರೋಪಿಸಿ ಪರಿಶಿಷ್ಟ ಸಮುದಾಯದ ಮುಖಂಡರು ಇತ್ತೀಚೆಗೆ ಶವ ಇಟ್ಟು ಪ್ರತಿಭಟನೆ ನಡೆಸಿದರು. ಈ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಅವರ ಊರಾದ ಹೇರೂರಿನಲ್ಲಿ ಸ್ಮಶಾನ ಇಲ್ಲ, ಇದ್ದ ಜಾಗವನ್ನು ಪ್ರಭಾವಿಗಳು ಒತ್ತುವರಿ ಮಾಡಿದ್ದಾರೆ ಎಂಬುದು ಕುಟುಂಬ ಸದಸ್ಯರ ಆರೋಪವಾಗಿತ್ತು.

ಆ ಪ್ರದೇಶದಲ್ಲಿ 47 ಎಕರೆ ಜಮೀನನ್ನು ಪ್ರಭಾವಿಗಳು ಒತ್ತುವರಿ ಮಾಡಿದ್ದಾರೆ. ಅಲ್ಲಿ ವಾಸಿಸುತ್ತಿರುವ ಹತ್ತಾರು ಪರಿಶಿಷ್ಟರ ಕುಟುಂಬಗಳು ಸ್ಮಶಾನಕ್ಕೆ ಜಾಗ ನೀಡುವಂತೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದಿವೆ. ಇವರ ಈ ಗೋಳನ್ನು ಕೇಳುವವರೇ ಇಲ್ಲವಾಗಿದೆ. ಹಾಗಾದರೆ ಸರ್ಕಾರದ ಕಾನೂನುಗಳು ಯಾರ ಹಿತಕ್ಕಾಗಿ ಇರುವುದು ಎಂಬ ಪ್ರಶ್ನೆ ಇಲ್ಲಿನ ಜನರನ್ನು ಕಾಡತೊಡಗಿದೆ.

ಚಾವಲ್ಮನೆ ಸುರೇಶ್ ನಾಯಕ್,ಹಾಲ್ಮುತ್ತೂರ್, ಕೊಪ್ಪ

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.