ADVERTISEMENT

ವಾಚಕರ ವಾಣಿ | ಧರ್ಮ–ರಾಜಕಾರಣದ ಹಸ್ತಕ್ಷೇಪ ಸಲ್ಲದು

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 14 ಫೆಬ್ರುವರಿ 2022, 20:15 IST
Last Updated 14 ಫೆಬ್ರುವರಿ 2022, 20:15 IST

ಧರ್ಮ–ರಾಜಕಾರಣದ ಹಸ್ತಕ್ಷೇಪ ಸಲ್ಲದು

ಕೊರೊನಾ ಕಾರಣದಿಂದ ಶಾಲಾ-ಕಾಲೇಜುಗಳಿಗೆ ಸತತವಾಗಿ ರಜೆ ಘೋಷಿಸಲಾಗಿತ್ತು. ಎಷ್ಟೋ ವಿದ್ಯಾರ್ಥಿಗಳು ಆನ್‌ಲೈನ್‌ ಶಿಕ್ಷಣ ಪಡೆದುಕೊಂಡರು. ಹಾಗೇ ಎಷ್ಟೋ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾದರು. ಅದರಲ್ಲೂ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷದಲ್ಲಿ ಏರುಪೇರುಗಳಾಗಿ, ಉನ್ನತ ಶಿಕ್ಷಣಕ್ಕೆ ಹೋಗುವ ವಿದ್ಯಾರ್ಥಿಗಳು ತೊಂದರೆ ಅನುಭವಿಸಬೇಕಾಯಿತು.

ಈಗ ಪದವಿ ವಿದ್ಯಾರ್ಥಿಗಳ ಪರೀಕ್ಷೆ ಪ್ರಾರಂಭವಾಗುವ ಹಂತದಲ್ಲಿದೆ. ಬಹಳಷ್ಟು ಕಾಲೇಜುಗಳಲ್ಲಿ ಪದವಿ ಪಠ್ಯ ಕ್ರಮ ಪೂರ್ಣಗೊಂಡಿಲ್ಲ. ಇಂತಹ ಸಂದರ್ಭದಲ್ಲಿ ಹಿಜಾಬ್– ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಕಾಲೇಜುಗಳಿಗೆ ರಜೆ ಘೋಷಿಸುವಂತಹ ಸ್ಥಿತಿ ಎದುರಾಗಿದ್ದು ವಿಷಾದಕರ. ವಿದ್ಯಾರ್ಥಿಗಳಲ್ಲಿ ಸೌಹಾರ್ದದ ಬಗ್ಗೆ ಮನವರಿಕೆ ಮಾಡ ಬೇಕಾಗಿದೆ. ಶೈಕ್ಷಣಿಕ ವ್ಯವಸ್ಥೆಯಲ್ಲಿ ಧರ್ಮ ಮತ್ತು ರಾಜಕಾರಣದ ಹಸ್ತಕ್ಷೇಪ ಸಲ್ಲ.

ADVERTISEMENT

- ಅಣ್ಣಾರಾಯ ಜಿ.ಪಿ.,ಕಲಬುರ್ಗಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.