ADVERTISEMENT

ವಾಚಕರ ವಾಣಿ | ಗಡಿ ಗ್ರಾಮಗಳ ಸಮಸ್ಯೆ ನಿವಾರಣೆಗೆ ಸ್ಪಂದಿಸಿ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 31 ಜುಲೈ 2022, 21:15 IST
Last Updated 31 ಜುಲೈ 2022, 21:15 IST

ನೆರೆರಾಜ್ಯಗಳ ಗಡಿಗಳಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿಗ್ರಾಮಗಳ ಅಭಿವೃದ್ಧಿಗೆ ಸರ್ಕಾರ ಈಗಲಾದರೂ ಗಂಭೀರವಾಗಿ ಪ್ರಯತ್ನಿಸಬೇಕು. ಈ ಸಂಬಂಧದ ‘ಒಳನೋಟ’ (ಪ್ರ.ವಾ., ಜುಲೈ 31), ರಾಜ್ಯದ ಗಡಿ ಪ್ರದೇಶಗಳ ಸಮಸ್ಯೆಗಳಿಗೆ ಕನ್ನಡಿ ಹಿಡಿದಿದೆ. ಅವುಗಳ ನಿವಾರಣೆಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು.

ಗಡಿ ಪ್ರದೇಶಗಳಲ್ಲಿ ಮೂಲ ಸೌಕರ್ಯ ವೃದ್ಧಿಗೆ ಆದ್ಯತೆ ನೀಡಬೇಕು. ಸರ್ಕಾರಿ ಶಾಲೆಗಳ ಬಲವರ್ಧನೆಯು ತುರ್ತಾಗಿ ಆಗಬೇಕು. ಆರೋಗ್ಯ ಕೇಂದ್ರಗಳ ನ್ಯೂನತೆಗಳನ್ನು ಸರಿಪಡಿಸಬೇಕು. ಸರೀಕರ ಎದುರು ತಲೆಎತ್ತಿ ನಿಲ್ಲಲು ಬೇಕಾದ ಕನಿಷ್ಠ ಸೌಕರ್ಯಗಳನ್ನು ಇನ್ನಾದರೂ ಕಲ್ಪಿಸಲಿ.

- ಶಕುಂತಲಾ ಎನ್.ಎಚ್.,ಬಾಗೇಪಲ್ಲಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.