ADVERTISEMENT

ಗ್ರಂಥಾಲಯ ಇಲಾಖೆಯೂ ವಿಲೀನಗೊಳ್ಳಲಿ

​ಪ್ರಜಾವಾಣಿ ವಾರ್ತೆ
Published 8 ಜೂನ್ 2020, 19:22 IST
Last Updated 8 ಜೂನ್ 2020, 19:22 IST

ರಾಜ್ಯ ಸರ್ಕಾರದ ಹಲವು ಇಲಾಖೆಗಳನ್ನು ವಿಲೀನ ಮಾಡುವುದಕ್ಕೆ ಸಚಿವ ಸಂಪುಟ ಉಪಸಮಿತಿ ಶಿಫಾರಸು ಮಾಡಿದೆ. ಈ ಶಿಫಾರಸಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳನ್ನು ಒಂದೇ ಇಲಾಖೆಯಡಿ ತರಬೇಕೆಂಬ ಸೂಚನೆ ಇದೆ.

ಇದರೊಂದಿಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆಯನ್ನೂ ಸೇರಿಸಿದರೆ ಉತ್ತಮ. ಮಾಹಿತಿ ಯುಗದ ಇಂದಿನ ದಿನಗಳಲ್ಲಿ, ಮಾಹಿತಿ ನೀಡುವ ಈ ಎಲ್ಲಾ ಇಲಾಖೆಗಳು ಒಂದೇ ಸೂರಿನಡಿ ಬರುವುದು ಕಾರ್ಯನಿರ್ವಹಣೆ ದೃಷ್ಟಿಯಿಂದ ಒಳ್ಳೆಯದು.

-ವೀರೇಶ ಬಿ.,ಹಾವೇರಿ

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.