ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಬಿಜೆಪಿ ಅನುಸರಿಸಿರುವ ಮಾರ್ಗ ಶ್ಲಾಘನೀಯ. ರಾಜಕೀಯ ಅಧಿಕಾರವು ಉಳ್ಳವರಿಗಷ್ಟೇ ಸೀಮಿತವಾಗದೆ ನಿಷ್ಠಾವಂತ ಕಾರ್ಯಕರ್ತನಿಗೂ ಎಟಕುವಂತೆ ಮಾಡಿದೆ.
ಜನರ ನಡುವೆ ಇದ್ದುಕೊಂಡು ಕೆಲಸ ಮಾಡುತ್ತಿರುವ ಈರಣ್ಣ ಕಡಾಡಿ ಮತ್ತು ಅಶೋಕ ಗಸ್ತಿ ಅವರಿಗೆ ಟಿಕೆಟ್ ನೀಡಿರುವುದು ಒಪ್ಪತಕ್ಕ ನಡೆ. ಉಳ್ಳವರು ಮತ್ತು ರಾಜಕೀಯ ಪ್ರಭಾವ ಹೊಂದಿರುವ ಕುಟುಂಬಗಳಿಗಷ್ಟೇ ಸದಾ ಮಣೆ ಹಾಕದೆ, ಶ್ರೀಸಾಮಾನ್ಯರು ಹಾಗೂ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ಕೊಡುವುದನ್ನು ಬಿಜೆಪಿಯೇತರ ಪಕ್ಷಗಳೂ ರೂಢಿಸಿಕೊಳ್ಳಲಿ. ಪಕ್ಷದ ಕಾರ್ಯಕರ್ತರಲ್ಲಿ ಆ ಮೂಲಕ ಆತ್ಮವಿಶ್ವಾಸ ಮೂಡುವಂತೆ ಮಾಡಲಿ.
-ಚಂದ್ರಶೇಖರ ಪುಟ್ಟಪ್ಪ,ಬೆಂಗಳೂರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.