ADVERTISEMENT

ಪ್ರಶಸ್ತಿಯ ಮೌಲ್ಯ ಹೆಚ್ಚಿಸಿ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 12 ಅಕ್ಟೋಬರ್ 2020, 19:31 IST
Last Updated 12 ಅಕ್ಟೋಬರ್ 2020, 19:31 IST

ರಾಜ್ಯ ಸರ್ಕಾರ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯನ್ನು, ಕೊರೊನಾ ನಿಯಂತ್ರಣಕ್ಕಾಗಿ ತೆರೆಮರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕನ್ನಡಿಗರನ್ನು ಗುರುತಿಸಿ ನೀಡಬೇಕು. ಕೊರೊನಾದಂತಹ ಸಂಕಷ್ಟದ ಸಮಯದಲ್ಲಿ ಪ್ರಾಣದ ಹಂಗು ತೊರೆದು ಕೆಲಸ ನಿರ್ವಹಿಸುತ್ತಿರುವ ಪ್ರಾಮಾಣಿಕ ವೈದ್ಯರು, ಸಿಬ್ಬಂದಿ‌, ಆಂಬುಲೆನ್ಸ್‌ ಚಾಲಕರು, ಪೊಲೀಸರು, ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಕೊರೊನಾ ಕಾರಣದಿಂದ ಮೃತಪಟ್ಟವರ ಅಂತ್ಯಸಂಸ್ಕಾರದಲ್ಲಿ ಸರ್ಕಾರಕ್ಕೆ ನೆರವಾಗುವವರು,ಆಹಾರ, ದವಸಧಾನ್ಯ ದಾನ ಮಾಡಿದವರು, ಅನ್ನದಾನ ಮಾಡಿದ ರೈತರು ಅಥವಾ ಸಾಮಾನ್ಯ ವ್ಯಕ್ತಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಆಗಬೇಕು.

ಆಗ ಈ ಪ್ರಶಸ್ತಿಯ ಮೌಲ್ಯ ಹೆಚ್ಚಾಗುತ್ತದೆ. ಈ ವಿಷಯದಲ್ಲಿ ಯಾವುದೇ ರಾಜಕೀಯ ಲಾಬಿ, ಒತ್ತಡಕ್ಕೆ ಸರ್ಕಾರ ಮಣಿಯಬಾರದು.

- ಚೆಲುವರಾಜು ಕೆ., ಧನಗೆರೆ, ಕೊಳ್ಳೇಗಾಲ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.