ADVERTISEMENT

ನಿರುದ್ಯೋಗಕ್ಕೆ ಪರಿಹಾರ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2019, 20:16 IST
Last Updated 16 ಏಪ್ರಿಲ್ 2019, 20:16 IST

ಭಾರತದಲ್ಲಿ ಇರುವಷ್ಟು ಯುವ ಸಂಪತ್ತು ವಿಶ್ವದ ಬೇರೆ ಯಾವ ರಾಷ್ಟ್ರದಲ್ಲಿಯೂ ಇಲ್ಲ. ಭಾರತದಂತಹ ಅಭಿವೃದ್ಧಿಶೀಲ ರಾಷ್ಟ್ರದಲ್ಲಿ ನಿರುದ್ಯೋಗವು ದೊಡ್ಡ ಸಮಸ್ಯೆಯಾಗಿದೆ. ಪ್ರತಿ ವರ್ಷ ಶಿಕ್ಷಣ ಮುಗಿಸುವ ಲಕ್ಷಾಂತರ ಯುವಜನರಿಗೆ ಸೂಕ್ತ ಉದ್ಯೋಗ ದೊರೆಯುತ್ತಿಲ್ಲ. ಗ್ರಾಮೀಣ ಪ್ರದೇಶದ ಯುವಜನರು ನಗರಗಳತ್ತ ಮುಖ ಮಾಡಿರುವುದೇ ಈ ಸಮಸ್ಯೆಗೆ ಕಾರಣವಾಗಿದೆ.

ಯುವಜನರು ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿ ಮತ್ತು ತಂತ್ರಜ್ಞಾನ ಬಳಸಿ ಅಧಿಕ ಇಳುವರಿ ಪಡೆದು ಹೆಚ್ಚಿನ ಲಾಭ ಗಳಿಸಬಹುದು. ಈ ಮೂಲಕ, ಸ್ವಾವಲಂಬಿಗಳಾಗಿ ಗೌರವಯುತ ಜೀವನ ನಡೆಸಬಹುದು. ಈಗಾಗಲೇ ಸಾಕಷ್ಟು ಯುವಜನರು ಕೃಷಿಯಲ್ಲಿ ಸಾಧನೆ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ನಿರುದ್ಯೋಗದ ಸಮಸ್ಯೆಯು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಹೋಗುತ್ತದೆ ವಿನಾ ಕಡಿಮೆಯಾಗುವುದಿಲ್ಲ.

-ಸುದರ್ಶನ್ ಎಚ್.ಎನ್., ಹಾಸನ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.