ADVERTISEMENT

ಒಂದು ಕೈಯಲ್ಲಿ ಕೊಟ್ಟು...

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2020, 20:00 IST
Last Updated 6 ಮಾರ್ಚ್ 2020, 20:00 IST

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮಂಡಿಸಿದ ಈ ಬಾರಿಯ ಬಜೆಟ್‌ನಲ್ಲಿ ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಏರಿಸಿರುವುದು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳ, ಹಾಲಿನ ದರ ಏರಿಕೆ, ಕೆಎಸ್ಆರ್‌ಟಿಸಿ ಪ್ರಯಾಣ ದರದ ಹೆಚ್ಚಳದಿಂದ ಈಗಾಗಲೇ ತತ್ತರಿಸಿರುವ ಜನರಿಗೆ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿತುಪ್ಪವಾಗಿ ಪರಿಣಮಿಸಿದೆ.

ಹೀಗೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರುತ್ತಾ ಹೋದರೆ ಜನಸಾಮಾನ್ಯರು ಬದುಕುವುದಾದರೂ ಹೇಗೆ? ಒಂದು ಕಡೆ ಸರ್ಕಾರ ಜನಸಾಮಾನ್ಯರ ಕಲ್ಯಾಣಕ್ಕೆ ಕೋಟ್ಯಂತರ ರೂಪಾಯಿ ಮೀಸಲಿಟ್ಟು, ಇನ್ನೊಂದು ಕಡೆ ನಿರಂತರವಾಗಿ ಬೆಲೆ ಏರಿಸಿದರೆ ಜನರ ಜೀವನಮಟ್ಟ ಸುಧಾರಿಸುವುದಾದರೂ ಹೇಗೆ?

ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಸಿದುಕೊಂಡಂತೆ ಅಲ್ಲವೇ?

ADVERTISEMENT

-ಮುರುಗೇಶ ಡಿ., ದಾವಣಗೆರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.