ADVERTISEMENT

ವಾಚಕರ ವಾಣಿ | ಕಳಪೆ ಬಿತ್ತನೆ ಬೀಜದ ಹಾವಳಿ ನಿಲ್ಲಲಿ

​ಪ್ರಜಾವಾಣಿ ವಾರ್ತೆ
Published 22 ಮೇ 2022, 18:18 IST
Last Updated 22 ಮೇ 2022, 18:18 IST

ರೈತರು ಅನುಭವಿಸುತ್ತಿರುವ ತೊಂದರೆ, ತಾಪತ್ರಯ ಒಂದೆರಡಲ್ಲ. ಪ್ರತಿವರ್ಷ ಬಿತ್ತನೆ ಸಮಯದಲ್ಲಿ ರೈತರಿಗೆ ಕಳಪೆ ಬೀಜ ವಿತರಣೆ ಮಾಡುವುದು ಸಾಮಾನ್ಯವಾಗಿದೆ. ಸರ್ಕಾರ ಎಷ್ಟೇ ಕ್ರಮ ಕೈಗೊಂಡರೂ ನಕಲಿ ಬಿತ್ತನೆ ಬೀಜ ವಿತರಣೆಯು ಆಗಾಗ ಬೆಳಕಿಗೆ ಬರುತ್ತಲೇ ಇರುತ್ತದೆ. ಕೆಲವು ಖಾಸಗಿ ಕಂಪನಿಗಳುಕಡಿಮೆ ದರದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ಮಾಡುತ್ತಿವೆ. ಇಂತಹ ಬೀಜಗಳನ್ನು ನಾಟಿ ಮಾಡಿದ ರೈತ ಸರಿಯಾಗಿ ಬೆಳೆ ಬರದೆ ಸಾಲದ ಸುಳಿಗೆ ಸಿಲುಕಿ ಒದ್ದಾಡುವಂತಾಗಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಬೀಜ ನಿಗಮವು ನಕಲಿ ಬೀಜ ಜಾಲಕ್ಕೆ ಕಡಿವಾಣ ಹಾಕಬೇಕಾಗಿದೆ.

ಕಳಪೆ ಬಿತ್ತನೆ ಬೀಜ, ಕ್ರಿಮಿನಾಶಕ ಮಾರಾಟ ಮಾಡುವ ಅಂಗಡಿಗಳ ಪರವಾನಗಿ ರದ್ದು ಮಾಡಿ ಸುಮ್ಮನೆ ಕೂರುವುದಲ್ಲ. ಇಂತಹವುಗಳ ವಿತರಣೆ ಮತ್ತು ಪೂರೈಕೆಯ ಜಾಲದ ಮೂಲವನ್ನು ಪತ್ತೆ ಹಚ್ಚಬೇಕು. ಇಲ್ಲವಾದರೆ ಪ್ರತಿವರ್ಷ ಇದು ಪುನರಾವರ್ತನೆ ಆಗುತ್ತಲೇ ಇರುತ್ತದೆ.
-ನಬಿಸಾಬ ಆರ್.ಬಿ. ದೋಟಿಹಾಳ, ಕುಷ್ಟಗಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT