ADVERTISEMENT

ವಾಚಕರ ವಾಣಿ | ಗ್ರಾಮೀಣ ಭಾಗಕ್ಕೆ ಬಸ್ ಓಡಿಸಿ

​ಪ್ರಜಾವಾಣಿ ವಾರ್ತೆ
Published 13 ಜುಲೈ 2020, 19:45 IST
Last Updated 13 ಜುಲೈ 2020, 19:45 IST

ಲಾಕ್‌ಡೌನ್‌ ತೆರವುಗೊಳಿಸಿದ ಸಂದರ್ಭದಲ್ಲಿ ಸಾರಿಗೆ ಸೇವೆಯನ್ನು ಗ್ರಾಮೀಣ ಪ್ರದೇಶದ ಕೆಲವು ಭಾಗಗಳಿಗೆ ವಿಸ್ತರಿಸಿಲ್ಲ. ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಈ ಭಾಗದ ವಿವಿಧ ಘಟಕಗಳಿಂದ ಪಟ್ಟಣ- ನಗರಗಳಿಗೆ ಹೆಚ್ಚಾಗಿ ಸಾರಿಗೆ ಸೇವೆಯನ್ನು ನೀಡಲಾಗುತ್ತಿದೆ.

ಗ್ರಾಮೀಣ ಪ್ರದೇಶಗಳಿಗೆ ಬಸ್ ಬಾರದ ಕಾರಣ ಜನ ತುಂಬಾ ತೊಂದರೆಗೆ ಒಳಗಾಗಿದ್ದಾರೆ. ಖಾಸಗಿ ವಾಹನಗಳು ದುಬಾರಿ ದರವನ್ನು ಕೇಳುತ್ತವೆ. ಇದರಿಂದ ಕೊರೊನಾದಿಂದ ಜನ ಎದುರಿಸುತ್ತಿರುವ ಸಂಕಷ್ಟ ಮತ್ತಷ್ಟು ಹೆಚ್ಚುವಂತಾಗಿದೆ. ನಿಗಮದ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.
–ಮಹಾಂತೇಶ ರಾಜಗೋಳಿ,ಬೈಲಹೊಂಗಲ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT