ADVERTISEMENT

‘ಅತೃಪ್ತ’ ರೋಗ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2020, 19:45 IST
Last Updated 26 ಫೆಬ್ರುವರಿ 2020, 19:45 IST

ವಿವಿಧ ಕಾರಣಗಳಿಗೆ ಮುನಿಸಿಕೊಂಡಿರುವ ಬಿಜೆಪಿ ಅತೃಪ್ತರು ಮುಂದಿನ ವಾರ ದೆಹಲಿಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ (ಪ್ರ.ವಾ., ಫೆ. 26). ಕಾಂಗ್ರೆಸ್‌– ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿ ಇದ್ದಾಗ ಅಲ್ಲಿಯ ಅತೃಪ್ತರ ಚಟುವಟಿಕೆಗಳನ್ನು ಬಿಜೆಪಿ ತನ್ನ ರಾಜಕೀಯಕ್ಕೆ ಬಳಸಿಕೊಂಡಿತು. ಹೀಗಾಗಿ, ಆಗ ಸ್ಥಿರ ಸರ್ಕಾರವಿಲ್ಲದೆ ಕರ್ನಾಟಕ ಬಸವಳಿಯಿತು. ಈಗ ಬಿಜೆಪಿ ನೇತೃತ್ವದ ಸರ್ಕಾರದಲ್ಲೂ ಅತೃಪ್ತರ ಈ ಬಗೆಯ ರೋಗದಿಂದ ಜನ ಕಷ್ಟ ಅನುಭವಿಸುವಂತಾಗಿದೆ.

ನಿರುದ್ಯೋಗದಂತಹ ಸಮಸ್ಯೆಗಳಿಂದ ಜನಸಾಮಾನ್ಯರು ತೊಳಲಾಡುತ್ತಿದ್ದಾರೆ. ಜನಪ್ರತಿನಿಧಿಗಳು ಇಂತಹ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸುವ ಬದಲು, ಮಂತ್ರಿ ಕುರ್ಚಿಗಾಗಿ ಲಾಬಿ ನಡೆಸುವುದರಲ್ಲೇ ಕಾಲ ಕಳೆಯುವುದು ತರವೇ?

-ಹುರುಕಡ್ಲಿ ಶಿವಕುಮಾರ

ADVERTISEMENT

ಬಾಚಿಗೊಂಡನಹಳ್ಳಿ, ಹಗರಿಬೊಮ್ಮನಹಳ್ಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.