ಕೋವಿಡ್‌ಗೆ ಸಂಬಂಧಿಸಿದಂತೆ ಸಕ್ರಿಯ ಪ್ರಕರಣಗಳಿಗಿಂತ ಗುಣಮುಖರ ಸಂಖ್ಯೆಯೇ ಅಧಿಕ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ. ಒಂದೆಡೆ, ಕೋವಿಡ್‌ಗೆ ಇನ್ನೂ ಮದ್ದು ಆವಿಷ್ಕಾರ ಆಗಿಲ್ಲ ಎನ್ನುತ್ತಿದ್ದಾರೆ.
ಇನ್ನೊಂದೆಡೆ, ಸೋಂಕಿತರಲ್ಲಿ ಹೆಚ್ಚಿನ ಸಂಖ್ಯೆಯ ರೋಗಿಗಳು ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಕೋವಿಡ್‌ಗೆ ಔಷಧಿಯೇ ಇಲ್ಲ ಎಂದ ಮೇಲೆ ಇಷ್ಟು ದೊಡ್ಡ ಸಂಖ್ಯೆಯಲ್ಲಿ ರೋಗಿಗಳು ಗುಣಮುಖರಾಗಿದ್ದು ಹೇಗೆ? ಅವರಿಗೆ ಯಾವ ಔಷಧ ಕೊಡಲಾಯಿತು ಎಂಬ ವಿವರವನ್ನು ಸರ್ಕಾರ ಯಾಕೆ ಬಿಡುಗಡೆ ಮಾಡುತ್ತಿಲ್ಲ?
-ರವಿಕಿರಣ್ ರೈ,ಮಂಗಳೂರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.