ADVERTISEMENT

ಬರ ನಿರ್ವಹಣೆ ಕಾರ್ಯ ಸುಸೂತ್ರವಾಗಲಿ

​ಪ್ರಜಾವಾಣಿ ವಾರ್ತೆ
Published 10 ಮೇ 2019, 20:30 IST
Last Updated 10 ಮೇ 2019, 20:30 IST

ಜನರು ಗುಳೆ ಹೋಗದಂತೆ ತಡೆಯುವುದು, ಕುಡಿಯುವ ನೀರು ಪೂರೈಕೆ, ಜಾನುವಾರುಗಳಿಗೆ ಮೇವು ಒದಗಿಸುವ ನಿರ್ಣಯವನ್ನು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವುದು(ಪ್ರ.ವಾ., ಮೇ 10) ಸೂಕ್ತವಾಗಿದೆ. ರಾಜ್ಯದಲ್ಲಿ ಬರದ ಛಾಯೆ ಮೂಡಿ ನೀರಿಗೆ ತತ್ವಾರ ಉಂಟಾಗಿದೆ.

ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಿಂದ ವಿಳಂಬವಾದರೂ, ಬರ ನಿರ್ವಹಣೆ ಕಾರ್ಯವನ್ನು ತ್ವರಿತಗತಿಯಲ್ಲಿ ಕೈಗೆತ್ತಿಕೊಳ್ಳಲು ಸಚಿವಾಲಯವು ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಸೂಚನೆ ನೀಡಿರುವುದು ಸ್ವಾಗತಾರ್ಹ. ಸದ್ಯಕ್ಕೆ ಗ್ರಾಮೀಣ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಬಿಡುಗಡೆ ಆಗಿರುವ ಹಣವನ್ನು ಸೂಕ್ತವಾಗಿ ಬಳಸಿಕೊಂಡು, ಜನ, ಜಾನುವಾರುಗಳ ಬರದ ಸಂಕಷ್ಟ ನೀಗಿಸಬೇಕಾಗಿದೆ.

- ಶ್ರೀನಾಥ ಮರಕುಂಬಿ, ಗಂಗಾವತಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.