ADVERTISEMENT

‘ಗಂಗಾ-ಕಾವೇರಿ’ ಪಾದಯಾತ್ರೆ ಯಾರಿಂದ?

​ಪ್ರಜಾವಾಣಿ ವಾರ್ತೆ
Published 20 ಜನವರಿ 2022, 16:26 IST
Last Updated 20 ಜನವರಿ 2022, 16:26 IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇತ್ತೀಚೆಗೆ ‘ಮೇಕೆದಾಟು’ ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ನಡೆಸಿದರು. ಇದರಿಂದ ತಮಗೆ ಹೆಚ್ಚು ಪ್ರಚಾರ ಸಿಕ್ಕಿ, ಮುಂದೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ತಾವು ಮುಖ್ಯಮಂತ್ರಿ ಆಗಬಹುದೆಂಬುದು ಇದರ ಹಿಂದಿನ ಉದ್ದೇಶ ಎಂಬ ಅಭಿಪ್ರಾಯವಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಮೇಕೆದಾಟು ಮಾದರಿಯಲ್ಲಿ ನರಗುಂದ- ಕಣಕುಂಬಿವರೆಗೆ ಪಾದಯಾತ್ರೆ ನಡೆಸುವುದಾಗಿ ಹೇಳಿದ್ದಾರೆ. ಉಪಮುಖ್ಯಮಂತ್ರಿಯಾದರೂ ಆಗಬಹುದು ಎಂಬುದು ಇವರ ಉದ್ದೇಶವೇ?! ಹಾಗೆಯೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ‘ಜನತಾ ಜಲಧಾರೆ’ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಮಾಡಲಿದ್ದಾರಂತೆ.

ಈ ಮೊದಲು ಗಂಗಾ- ಕಾವೇರಿ ನದಿಗಳ ಜೋಡಣೆಯ ವಿಷಯ ಕೇಳಿಬಂದಿತ್ತು. ಮುಂದಿನ ಪ್ರಧಾನ ಮಂತ್ರಿ ಆಗುವ ಕನಸು ಕಾಣುತ್ತಿರುವವರು ‘ಗಂಗಾ- ಕಾವೇರಿ ನದಿಗಳ ಜೋಡಣೆ ಯೋಜನೆ’ ಜಾರಿಗೆ ಆಗ್ರಹಿಸಿ ಕರ್ನಾಟಕದ ತಲಕಾವೇರಿಯಿಂದ ಹಿಮಾಲಯದವರೆಗೆ ಪಾದಯಾತ್ರೆ ಮಾಡಬಹುದೇ?!

ಸಿ.ಸಿದ್ದರಾಜು ಆಲಕೆರೆ, ಮಂಡ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT