ADVERTISEMENT

ವಾಚಕರ ವಾಣಿ | ಕೀಳರಿಮೆ ಹೋಗಲಾಡಿಸುವ ಕೆಲಸವಾಗಲಿ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 3 ಆಗಸ್ಟ್ 2022, 21:15 IST
Last Updated 3 ಆಗಸ್ಟ್ 2022, 21:15 IST

ಹಳ್ಳಿಯ ಮಕ್ಕಳಲ್ಲಿ ಕೆಲವೊಂದು ವಿಷಯಗಳಲ್ಲಿ ಸಹಜವಾಗಿ ಕೀಳರಿಮೆ ಇರುತ್ತದೆ. ಈ ಬಗ್ಗೆ ಸದಾಶಿವ್ ಸೊರಟೂರು ತಮ್ಮ ಲೇಖನದಲ್ಲಿ ಪ್ರಸ್ತಾಪಿಸಿದ್ದಾರೆ (ಸಂಗತ, ಆ. 3). ಸರಿಯಾದ ರೀತಿಯಲ್ಲಿ ಮಕ್ಕಳಿಗೆ ಮಾರ್ಗದರ್ಶನ ನೀಡಿ, ಅವರ ಕೀಳರಿಮೆಯನ್ನು ಹೋಗಲಾಡಿಸುವ ಗುರುತರ ಜವಾಬ್ದಾರಿ ಶಿಕ್ಷಕರದ್ದು ಮತ್ತು ಪೋಷಕರದ್ದು. ನಗರಗಳ ಬಗ್ಗೆ, ಖಾಸಗಿ ಶಾಲೆಗಳ ವಿಷಯದಲ್ಲಿ ಮತ್ತು ಇಂಗ್ಲಿಷ್ ಮಾಧ್ಯಮ ಹಾಗೂ ಸಿಬಿಎಸ್‍ಇ, ಐಸಿಎಸ್‍ಇ ಪಠ್ಯ ಕುರಿತು ಮಕ್ಕಳಲ್ಲಿ ಅಷ್ಟೇ ಏಕೆ, ಪೋಷಕರಲ್ಲೂ ಮನೆ ಮಾಡಿಕೊಂಡಿರುವ ಮೇಲರಿಮೆಯನ್ನು ಕಳಚುವ ಕೆಲಸವನ್ನು ಶಿಕ್ಷಕರು ಮಾಡಬೇಕಿದೆ.

ಹಳ್ಳಿಯಲ್ಲಿ ಹುಟ್ಟಿ ಬೆಳೆದ, ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಕಲಿತ, ಕನ್ನಡ ನಾಡಿಗೆ, ಕನ್ನಡ ಭಾಷೆಗೆ ಗಣನೀಯ ಸೇವೆ ಸಲ್ಲಿಸಿದ ಮಹನೀಯರ ಕುರಿತು ಶಿಕ್ಷಕರು ತರಗತಿಗಳಲ್ಲಿ ಮಕ್ಕಳಿಗೆ ಹೇಳಬೇಕಿದೆ. ಕರ್ನಾಟಕ ಸರ್ಕಾರದ ಆಡಳಿತದ ಚುಕ್ಕಾಣಿ ಹಿಡಿದು ರಾಜ್ಯವನ್ನು ಮುನ್ನಡೆಸಿದ ಬಹುತೇಕರು ಹಳ್ಳಿಯವರು ಮತ್ತು ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದವರು ಎಂಬ ಸತ್ಯವನ್ನು ಮಕ್ಕಳಿಗೆ ಮನವರಿಕೆ ಮಾಡಬೇಕಿದೆ. ಸರ್ಕಾರದ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದವರು ಮತ್ತು ಸೇವೆ ಸಲ್ಲಿಸುತ್ತಿರುವ ಬಹಳ ಮಂದಿ ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಓದಿದವರು ಎಂಬ ವಾಸ್ತವದ ಅರಿವನ್ನು ಮಕ್ಕಳಿಗೆ ಮೂಡಿಸುವುದರ ಮೂಲಕ ಅವರಲ್ಲಿ ಅನಗತ್ಯವಾಗಿ ತುಂಬಿಕೊಂಡಿರುವ ಕೀಳರಿಮೆಯನ್ನು ಹೋಗಲಾಡಿಸಬೇಕು.

- ಸಿ.ಚಿಕ್ಕತಿಮ್ಮಯ್ಯ ಹಂದನಕೆರೆ,ಬೆಂಗಳೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.