ADVERTISEMENT

ವಾಚಕರ ವಾಣಿ | ಕಾಮನ್‌ವೆಲ್ತ್ ಕ್ರೀಡೆ: ಮಹಿಳೆಯರ ಚಾರಿತ್ರಿಕ ಸಾಧನೆ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 3 ಆಗಸ್ಟ್ 2022, 21:30 IST
Last Updated 3 ಆಗಸ್ಟ್ 2022, 21:30 IST

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದ ಲಾನ್ ಬಾಲ್ಸ್ ರಿಂಕ್ಸ್‌ನಲ್ಲಿ ಭಾರತದ ಮಹಿಳಾ ತಂಡವು ಚಿನ್ನದ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿ. ಈ ಕ್ರೀಡಾಕೂಟದಲ್ಲಿ ದೊರೆತ ಮೊದಲ ಚಿನ್ನ ಇದಾಗಿರುವುದು ಮತ್ತೊಂದು ವಿಶೇಷ.

ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಭಾರತೀಯ ಕ್ರೀಡಾರಂಗದಲ್ಲಿ ಮಹಿಳಾ ಕ್ರೀಡಾಪಟುಗಳ ಸಂಖ್ಯೆ ಹೆಚ್ಚುತ್ತಿದ್ದು, ಅವರ ಸಾಧನೆಗೆ ಮತ್ತಷ್ಟು ಬೆಂಬಲ ದೊರೆತಿದೆ. ಬಾಲ್ಯದಲ್ಲೇ ಹೆಣ್ಣುಮಕ್ಕಳಿಗೆ ಅವರ ಆಸಕ್ತಿಯ ಕ್ರೀಡಾ ಕ್ಷೇತ್ರದಲ್ಲಿ ಪ್ರೋತ್ಸಾಹ ನೀಡಿದರೆ ದೇಶಕ್ಕೆ ಹೆಮ್ಮೆ ತರಬಲ್ಲರು ಎಂಬುದಕ್ಕೆ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಸಾಧನೆಯೇ ಸಾಕ್ಷಿ.

- ಮೇರಿ ಜಾರ್ಜ್,ಚಿತ್ರದುರ್ಗ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.