ADVERTISEMENT

ವಾಚಕರ ವಾಣಿ | ಅನುದಾನಿತ ಶಾಲಾ ಮಕ್ಕಳನ್ನೂ ಒಳಪಡಿಸಿ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 19 ಮೇ 2022, 19:30 IST
Last Updated 19 ಮೇ 2022, 19:30 IST

ರಾಜ್ಯದಲ್ಲಿ ಕಳೆದ ಎರಡು ವರ್ಷದಿಂದ ಕೋವಿಡ್ ಕಾರಣಕ್ಕೆ ಮಕ್ಕಳಲ್ಲಿ ಉಂಟಾಗಿರುವ ಕಲಿಕಾ ಹಿನ್ನಡೆಯನ್ನು ಸರಿದೂಗಿಸಲು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸ್ವಾಗತಾರ್ಹ. ಇದು, ಮಕ್ಕಳ ಶೈಕ್ಷಣಿಕ ಬೆಳವಣಿಗೆ ದೃಷ್ಟಿಯಿಂದ ಪರಿಣಾಮಕಾರಿಯಾದುದು. ಆದರೆ ಇಂತಹ ಮಹತ್ವದ ಕಾರ್ಯಕ್ರಮದ ತರಬೇತಿಯನ್ನು ಸರ್ಕಾರಿ ಶಾಲಾ ಶಿಕ್ಷಕರಿಗೆ ಮಾತ್ರ ಕೊಟ್ಟು, ಅನುದಾನಿತ ಶಾಲಾ ಶಿಕ್ಷಕರಿಗೆ ಕೊಡದೇ ಇರುವುದು ತರವಲ್ಲ. ಇದರಿಂದ, ಅನುದಾನಿತ ಶಾಲಾ ಮಕ್ಕಳಿಗೆ ಇದರ ಉಪಯೋಗ ಸಿಗದಂತೆ ಆಗಿದೆ. ಹಾಗಾಗಿ ಶಿಕ್ಷಣ ಇಲಾಖೆಯು ಅನುದಾನಿತ ಶಾಲಾ ಶಿಕ್ಷಕರಿಗೂ ಈ ತರಬೇತಿ ನೀಡಬೇಕು.

–ಸನಾವುಲ್ಲಾ ನವಿಲೇಹಾಳ್, ದಾವಣಗೆರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT