ADVERTISEMENT

ವಾಚಕರ ವಾಣಿ: ಅರ್ಹರಿಗೆ ಮರೀಚಿಕೆಯಾಗದಿರಲಿ ಡಿಪ್ಲೊಮಾ ಪ್ರವೇಶ

​ಪ್ರಜಾವಾಣಿ ವಾರ್ತೆ
Published 7 ಜೂನ್ 2022, 19:30 IST
Last Updated 7 ಜೂನ್ 2022, 19:30 IST

ರಾಜ್ಯ ಪಠ್ಯಕ್ರಮದ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟವಾದ ಕೂಡಲೇ, ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಎಂಜಿನಿಯರಿಗ್ ಕಾಲೇಜುಗಳಲ್ಲಿ ಮೊದಲು ಬಂದವರಿಗೆ ಮೊದಲ ಆದ್ಯತೆಯ ಮೇರೆಗೆ ಡಿಪ್ಲೊಮಾ ಎಂಜಿನಿಯರಿಂಗ್‌ಗೆ ಪ್ರವೇಶ ನೀಡಲು ಅಧಿಸೂಚನೆ ಹೊರಡಿಸಲಾಗಿದೆ. ಇದರ ಅನುಸಾರ, ರಾಜ್ಯದ ಬಹುತೇಕ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ, ರಾಜ್ಯ ಪಠ್ಯಕ್ರಮದ ಎಸ್ಎಸ್ಎಲ್‌ಸಿ ಪಾಸಾದ ವಿದ್ಯಾರ್ಥಿಗಳೇ ಪ್ರವೇಶ ಪಡೆದಿದ್ದು, ಬಹುತೇಕ ಎಲ್ಲಾ ಸೀಟುಗಳು ಈಗಾಗಲೇ ಭರ್ತಿಯಾಗಿವೆ. ಸಿಬಿಎಸ್ಇ ಮತ್ತು ಐಸಿಎಸ್ಇ ಪಠ್ಯಕ್ರಮದ ಪರೀಕ್ಷಾ ಫಲಿತಾಂಶ ಇನ್ನೂ ಪ್ರಕಟವಾಗದಿರುವುದರಿಂದ ಈ ಪರೀಕ್ಷೆಗಳನ್ನು ಬರೆದಿರುವ ಪ್ರತಿಭಾವಂತ ಡಿಪ್ಲೊಮಾ ಆಕಾಂಕ್ಷಿ ಬಡ ವಿದ್ಯಾರ್ಥಿಗಳಿಗೆ ಡಿಪ್ಲೊಮಾ ಪ್ರವೇಶ ಮರೀಚಿಕೆಯಾಗಿದೆ. ಈ ವಿದ್ಯಾರ್ಥಿಗಳು ಖಾಸಗಿ ಸಂಸ್ಥೆಗಳ ಆಡಳಿತ ಮಂಡಳಿ ಕೋಟಾದಲ್ಲಿ ಪ್ರವೇಶ ಪಡೆಯುವಂತಾಗಿದೆ.

ಸಿಬಿಎಸ್ಇ, ಐಸಿಎಸ್ಇ ಪರೀಕ್ಷೆ ಫಲಿತಾಂಶ ಪ್ರಕಟವಾದ ನಂತರ ಡಿಪ್ಲೊಮಾ ಪ್ರವೇಶ ಪ್ರಕ್ರಿಯೆ ಪ್ರಾರಂಭಿಸಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ. ಈ ವಿದ್ಯಾರ್ಥಿಗಳಿಗೆ ಸೂಕ್ತ ನ್ಯಾಯ ಸಿಗಬೇಕು ಮತ್ತು ಮುಂದಿನ ಶೈಕ್ಷಣಿಕ ವರ್ಷದಿಂದಲಾದರೂ ಸಾಧಕ– ಬಾಧಕಗಳನ್ನು ಅವಲೋಕಿಸಿ, ಇಂಥ ತಪ್ಪು ಮರುಕಳಿಸದಂತೆ ಎಚ್ಚರ ವಹಿಸಬೇಕು.

-ಆರ್.ಕುಮಾರ್, ಬೆಂಗಳೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.