ADVERTISEMENT

ಸಮಷ್ಟಿ ಪ್ರಜ್ಞೆ ಅಗತ್ಯ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2021, 19:31 IST
Last Updated 4 ಏಪ್ರಿಲ್ 2021, 19:31 IST

ರಾಜ್ಯ ಸರ್ಕಾರವು ಕೋವಿಡ್-19 ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತೆಗೆದುಕೊಂಡಿರುವ ಕಠಿಣ ನಿಯಮಗಳ ವಿರುದ್ಧ ನಿರ್ಮಾಪಕ ಕೆ.ಮಂಜು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರೊನಾದಂತಹ ಮಹಾಸೋಂಕಿನಿಂದ ಜನರನ್ನು ಕಾಪಾಡುವ ದೃಷ್ಟಿಯಿಂದ ಇಂತಹ ಕಠಿಣ ಮಾರ್ಗಗಳು ಕೆಲವೊಮ್ಮೆ ಅನಿವಾರ್ಯವಾಗುತ್ತವೆ. ಇಂತಹ ಸಂದರ್ಭಗಳಲ್ಲಿ ವೈಯಕ್ತಿಕವಾಗಿ ನಷ್ಟವಾದರೂ ಸಾಮಾಜಿಕ ಹಿತದೃಷ್ಟಿಯಿಂದ ಸಹಕರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂಬುದನ್ನು ಮರೆಯಬಾರದು. ನಿರ್ಮಾಪಕರಿಗೆ ಹಾಕಿದ ಬಂಡವಾಳ ವಾಪಸು ಪಡೆಯುವ ಮತ್ತು ಲಾಭ ಮಾಡಿಕೊಳ್ಳುವ ಅಪೇಕ್ಷೆ ಇರುವುದು ಸಹಜ. ಹಾಗೆಂದು, ಅಂಥ ಕೆಲವರ ವ್ಯಾಪಾರಕ್ಕಾಗಿ ಒಟ್ಟಾರೆ ಸಮಾಜದ ಹಿತವನ್ನು ಬಲಿಗೊಡಲಾಗದು.

–ಬಸೆಟ್ಟೆಪ್ಪ ಡಿ.ಎಂ., ಕುರುಗೋಡು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT