ADVERTISEMENT

ಜೀವ ಇದ್ದರೆ ಸಿನಿಮಾ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2021, 19:31 IST
Last Updated 4 ಏಪ್ರಿಲ್ 2021, 19:31 IST

ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತರಬೇಕು. ಸಿನಿಮಾ ಮಂದಿರಗಳಿಗೆ ಶೇ 50ರಷ್ಟು ಸೀಟು ಭರ್ತಿಗೆ ಮಾತ್ರ ಅವಕಾಶ ಕಲ್ಪಿಸುವ ನಿಯಮ ತಂದರೂ ಕೆಲವರ ಒತ್ತಡಕ್ಕೆ ಮಣಿದು ಅದನ್ನು ಹಿಂದಕ್ಕೆ ಪಡೆದಿರುವುದು ವಿಷಾದನೀಯ. ಸಿನಿಮಾ ಮಂದಿಯೂ ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳಬೇಕು. ಜನರ ಜೀವ ಇದ್ದರೆ ಸಿನಿಮಾ. ಅವರ ಜೀವವೇ ನಷ್ಟ ಆಗುವುದಾದರೆ ಯಾರಿಗಾಗಿ ಸಿನಿಮಾ?

ಸರ್ಕಾರ ಯಾರ ಒತ್ತಡಕ್ಕೂ ಮಣಿಯದೆ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಸಾರ್ವಜನಿಕರು ಸೇರಿದಂತೆ ಎಲ್ಲರೂ ಸಮಸ್ಯೆಯ ಗಂಭೀರತೆ ಅರ್ಥ ಮಾಡಿಕೊಂಡು ಕೋವಿಡ್ ನಿಯಂತ್ರಣಕ್ಕೆ ಸಹಕಾರ ನೀಡಲಿ.

–ಡಾ. ರುದ್ರೇಶ್ ಅದರಂಗಿ, ಬೆಂಗಳೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.