ADVERTISEMENT

ಕಟ್ಟುನಿಟ್ಟಿನ ನಿಯಂತ್ರಣ ಅಗತ್ಯ

​ಪ್ರಜಾವಾಣಿ ವಾರ್ತೆ
Published 25 ಜೂನ್ 2020, 19:26 IST
Last Updated 25 ಜೂನ್ 2020, 19:26 IST

ಕೊರೊನಾ ಸೋಂಕು ದೇಶದಾದ್ಯಂತ ವ್ಯಾಪಕವಾಗಿ ಹರಡುತ್ತಿದೆ. ಸೋಂಕನ್ನು ಪರಿಣಾಮಕಾರಿಯಾಗಿ ಎದುರಿಸಲು ರಾಜ್ಯದಾದ್ಯಂತ ಪುನಃ ಲಾಕ್‌ಡೌನ್ ಘೋಷಿಸಲು ಸರ್ಕಾರದ ಮೇಲೆ ಕೆಲವರು ಒತ್ತಡ ಹಾಕುತ್ತಿದ್ದಾರೆ. ಹೊರ ರಾಜ್ಯಗಳಿಂದ ಬರುವವರ ಸಂಖ್ಯೆ ಹೆಚ್ಚಿರುವುದರಿಂದ ಮತ್ತು ವಾಣಿಜ್ಯ– ವ್ಯವಹಾರಕ್ಕೆ ನಿರ್ಬಂಧ ಇಲ್ಲದೇ ಇರುವುದರಿಂದ ರಾಜ್ಯದಲ್ಲಿ ಸೋಂಕಿನ ವೇಗ ಹೆಚ್ಚುತ್ತಿದೆ. ಹೋಂ ಕ್ವಾರಂಟೈನ್‌ನಲ್ಲಿ ಇರಬೇಕಾದವರು ಎಗ್ಗಿಲ್ಲದೆ ಎಲ್ಲಾ ಕಡೆ ಓಡಾಡಿ ಸೋಂಕಿತರ ಸಂಖ್ಯೆಯನ್ನು ಹೆಚ್ಚಿಸುತ್ತಿದ್ದಾರೆಂಬ ವರದಿಗಳೂ ಇವೆ. ಪರಿಸ್ಥಿತಿ ಕೈಮೀರುವ ಮುಂಚೆ ರಾಜ್ಯ ಸರ್ಕಾರ ಕೆಲವು ನಿಯಂತ್ರಣ ಕ್ರಮಗಳನ್ನು ಬಿಗಿಗೊಳಿಸಬೇಕು.

-ಕೆ.ವಿ.ವಾಸು, ಮೈಸೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT