ADVERTISEMENT

ವಾಚಕರ ವಾಣಿ: ಹಳ್ಳಿ ಜನ ಕಾಯುತ್ತಿದ್ದಾರೆ ಖಾಸಗಿ ಬಸ್‌ಗೆ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2020, 16:38 IST
Last Updated 23 ಆಗಸ್ಟ್ 2020, 16:38 IST

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ರಾಜ್ಯಗಳಿಗೆ ಅನ್‌ಲಾಕ್‍ ಅಧಿಕಾರ ನೀಡಿದಾಗ, ಸರ್ಕಾರಿ ಬಸ್‌ಗಳ ಓಡಾಟ ಆರಂಭವಾಯಿತು. ಆದರೆ ಖಾಸಗಿ ಬಸ್‌ಗಳ ಓಡಾಟ ಇದುವರೆಗೂ ಸಾಧ್ಯವಾಗಿಲ್ಲ. ಗ್ರಾಮಿಣ ಪ್ರದೇಶದ ಜನ ತಮ್ಮ ಸಂಚಾರಕ್ಕಾಗಿ ಖಾಸಗಿ ಬಸ್‍ಗಳನ್ನು ಹೆಚ್ಚಾಗಿ ಅವಲಂಬಿಸಿದ್ದಾರೆ. ಲಾಕ್‌ಡೌನ್‌ ಸಂದರ್ಭದಲ್ಲಿ ಉಂಟಾದ ನಷ್ಟದಿಂದ ಬಹಳಷ್ಟು ನಷ್ಟ ಅನುಭವಿಸಿರುವ ಖಾಸಗಿ ಬಸ್‌ಗಳ ಮಾಲೀಕರು ಸರ್ಕಾರದ ಮುಂದೆ ಕೆಲವು ಬೇಡಿಕೆ ಗಳನ್ನು ಇಟ್ಟಿದ್ದರು. ಈ ಸಮಸ್ಯೆ ಇನ್ನೂ ಬಗೆಹರಿಯದೆ ಖಾಸಗಿ ಬಸ್‌ಗಳು ರಸ್ತೆಗೆ ಇಳಿಯದಿರುವುದರಿಂದ ಗ್ರಾಮಸ್ಥರು ತೊಂದರೆ ಅನುಭವಿಸುವಂತಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರ ಈ ಸಮಸ್ಯೆ ಬಗೆಹರಿಸಿ, ಖಾಸಗಿ ಬಸ್‌ಗಳ ಓಡಾಟಕ್ಕೆ ಅನುವು ಮಾಡಿಕೊಡಬೇಕು.

-ಶ್ರೀಧರ ಡಿ. ರಾಮಚಂದ್ರಪ್ಪ, ತುರುವನೂರು,ಚಿತ್ರದುರ್ಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT