ADVERTISEMENT

ಹಳ್ಳಿಗರಿಂದ ಸವಾಲು: ಜಾಗೃತಿಯೇ ಅಸ್ತ್ರ

​ಪ್ರಜಾವಾಣಿ ವಾರ್ತೆ
Published 10 ಮೇ 2021, 19:31 IST
Last Updated 10 ಮೇ 2021, 19:31 IST

ಸರ್ಕಾರಗಳು ಕೊರೊನಾ ವೈರಸ್‌ ಅನ್ನು ನಗರ ಪ್ರದೇಶಗಳಲ್ಲಿಯೇ ನಿಯಂತ್ರಿಸಲು ಹೆಣಗಾಡುತ್ತಿರುವ ಈ ಸಂದರ್ಭದಲ್ಲಿ, ಗ್ರಾಮೀಣ ಪ್ರದೇಶದಲ್ಲಿ ವೈರಸ್ ಹರಡುವ ಅಪಾಯ ಹೆಚ್ಚಾಗಿದೆ. ಸೋಂಕಿತರು ಮತ್ತು ಸಾವಿನ ಸಂಖ್ಯೆಯು ಹೆಚ್ಚುತ್ತಿದೆ. ಹಳ್ಳಿಗರಲ್ಲಿ ವೈರಸ್ ಬಗ್ಗೆ ಜಾಗೃತಿಯ ಕೊರತೆ ಇರುವುದು ಮತ್ತು ರೋಗಲಕ್ಷಣಗಳ ಬಗ್ಗೆ ಅರಿವಿಲ್ಲದಿರುವುದು ಕೂಡ ರೋಗ ನಿಯಂತ್ರಣಕ್ಕೆ ದೊಡ್ಡ ಸವಾಲು ಆಗಬಹುದು.

ನಮ್ಮ ಆರೋಗ್ಯ ವ್ಯವಸ್ಥೆಯು ಗ್ರಾಮೀಣ ಭಾಗದಲ್ಲಿ ಹೆಚ್ಚು ದುರ್ಬಲವಾಗಿದೆ. ಹೀಗಾಗಿ, ಸರ್ಕಾರ ಮತ್ತು ಸ್ವಯಂಸೇವಾ ಸಂಸ್ಥೆಗಳು ಗ್ರಾಮಸ್ಥರಿಗೆ ಲಸಿಕೆ ಬಗ್ಗೆ ಹೆಚ್ಚು ಜ್ಞಾನ ಮತ್ತು ಲಸಿಕೆ ಪಡೆಯಬೇಕಾದ ಅನಿವಾರ್ಯವನ್ನು ಅರ್ಥೈಸಿ, ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅವರಲ್ಲಿ ನಿರಂತರ ಜಾಗೃತಿ ಮೂಡಿಸಬೇಕಾಗಿದೆ.

ಪ್ರವೀಣ ನಾಗಪ್ಪ ಯಲವಿಗಿ, ಹಾವೇರಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.