ADVERTISEMENT

ಸತ್ಸಂಪ್ರದಾಯಕ್ಕೆ ವಿರೋಧ ಸಲ್ಲ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2021, 19:30 IST
Last Updated 12 ಆಗಸ್ಟ್ 2021, 19:30 IST

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜೆಡಿಎಸ್‌ ಮುಖಂಡ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾದುದಕ್ಕೆ ಶಾಸಕರೊಬ್ಬರು ವಿರೋಧ ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಸಾಮಾನ್ಯವಾಗಿ, ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡವರು ರಾಜ್ಯದ ಹಿರಿಯ ರಾಜಕಾರಣಿಗಳನ್ನು ಭೇಟಿ ಮಾಡಿ ಅವರ ಸಲಹೆ ಸೂಚನೆಗಳನ್ನು ಪಡೆದುಕೊಳ್ಳುವುದು ಒಂದು ಒಳ್ಳೆಯ ಸಂಪ್ರದಾಯವಾಗಿ ಬೆಳೆದುಬಂದಿದೆ.

ಈ ಹಿಂದೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಂತಹ ಅನೇಕ ವ್ಯಕ್ತಿಗಳು ಈ ಸಂಪ್ರದಾಯ ಪಾಲಿಸಿದ್ದಾರೆ. ದೇವೇಗೌಡರು ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಅಂತಹ ದೊಡ್ಡ ವ್ಯಕ್ತಿಯನ್ನು ಭೇಟಿ ಮಾಡಿ ಅವರ ಆಶೀರ್ವಾದ, ಸಲಹೆ ಸೂಚನೆಗಳನ್ನು ಪಡೆದುಕೊಳ್ಳುವುದು ಸುಸಂಸ್ಕೃತ ನಡೆಯಾಗಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸುವುದು ಸಣ್ಣತನದ ನಡೆ ಎನಿಸಿಕೊಳ್ಳುತ್ತದೆ.

ಕೆ.ವಿ.ವಾಸು,ಮೈಸೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.