ADVERTISEMENT

ಪ್ರವಾಸ: ಇರಲಿ ಎಚ್ಚರ

​ಪ್ರಜಾವಾಣಿ ವಾರ್ತೆ
Published 13 ಜುಲೈ 2022, 19:30 IST
Last Updated 13 ಜುಲೈ 2022, 19:30 IST

ರಾಜ್ಯದ ಕೆಲವೆಡೆ ಒಂದು ವಾರದಿಂದ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ನದಿ, ಹಳ್ಳ-ಕೊಳ್ಳ, ತೊರೆಗಳು ತುಂಬಿ ಹರಿಯುತ್ತಿವೆ. ಇವುಗಳಿಂದ ಸೃಷ್ಟಿಯಾಗುವ ಜಲಪಾತಗಳ ಸೊಬಗು ಕಣ್ತುಂಬಿಕೊಳ್ಳಲು ಪ್ರವಾಸಿಗರು ಧಾವಿಸಿ ಬರುವುದು ಸಾಮಾನ್ಯ.

ಕಣಿವೆ ಪ್ರದೇಶಗಳಲ್ಲಿ ಗುಡ್ಡ ಕುಸಿತದಂತಹ ಪ್ರಕರಣಗಳು ಸಂಭವಿಸುತ್ತಿರುವುದರಿಂದ ಪ್ರವಾಸಿಗರು ಎಚ್ಚರಿಕೆ ವಹಿಸುವುದು ಅತಿಮುಖ್ಯ. ಮೈಮರೆತು ಅಪಾಯಕಾರಿ ಸ್ಥಳಗಳಲ್ಲಿ ನಿಂತು ಮೊಬೈಲ್ ಮೂಲಕ ಸೆಲ್ಫಿ ತೆಗೆದುಕೊಳ್ಳುವುದು, ನೀರಿಗೆ ಇಳಿದು ಆಟ ಆಡುವುದು, ಜಲಪಾತದ ತುದಿಯ ಬಂಡೆಗಳ ಮೇಲೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳುವುದು, ನೀರಿನ ಆಳ ಲೆಕ್ಕಿಸದೆ ಈಜಲು ಇಳಿಯುವುದು ಸುರಕ್ಷತಾ ದೃಷ್ಟಿಯಿಂದ ಒಳ್ಳೆಯ ನಡೆಯಲ್ಲ. ಇಂತಹ ರಮಣೀಯ ಸ್ಥಳಗಳಲ್ಲಿ ಜವಾಬ್ದಾರಿಯಿಂದ ವರ್ತಿಸಿ, ತಮ್ಮ ಪ್ರವಾಸವನ್ನು
ಸುಖಮಯಗೊಳಿಸಿಕೊಳ್ಳಬೇಕು.

⇒ಆರ್.ಬಿ.ಜಿ.ಘಂಟಿ,ಅಮೀನಗಡ,ಬಾಗಲಕೋಟೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.