ADVERTISEMENT

ವಾಚಕರ ವಾಣಿ | ಟೀಕೆ–ಟ್ರೋಲ್: ಜವಾಬ್ದಾರಿ ಅರಿತರೆ ಪ್ರಯೋಜನ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2020, 19:30 IST
Last Updated 5 ಆಗಸ್ಟ್ 2020, 19:30 IST

ಸಾಮಾಜಿಕ ಜಾಲತಾಣಗಳು ಸಮಾಜದ ಅಂಕುಡೊಂಕು ತಿದ್ದುವ ಕೆಲಸ ಮಾಡಬೇಕಾಗಿರುವುದು ಅವಶ್ಯಕ. ಈ ದಿಸೆಯಲ್ಲಿ ಅವು ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಿದರೆ, ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಆದರೆ ಇಲ್ಲಿ ವ್ಯಕ್ತಿಗತ ಟೀಕೆಗಳೇ ಹೆಚ್ಚಾಗಿರುತ್ತವೆ. ಇದರಿಂದ ಯಾವ ಪ್ರಯೋಜನವೂ ಆಗದು.

ನಮ್ಮ ಊರಿಗೆ ಅಥವಾ ಜಿಲ್ಲೆಗೆ ಆಗಬೇಕಿರುವ ಕಾರ್ಯಗಳ ಬಗ್ಗೆಯೋ ಅಥವಾ ನಮ್ಮ ವ್ಯವಸ್ಥೆಯಲ್ಲಿನ ಅವ್ಯವಸ್ಥೆಯ ಬಗ್ಗೆಯೋ ಟೀಕೆ- ಟ್ರೋಲ್ ಮಾಡಿದರೆ, ಕೊನೇಪಕ್ಷ ಆರು ತಿಂಗಳಿಗೆ ಆಗುವ ಕೆಲಸ ಮೂರು ತಿಂಗಳಿಗಾದರೂ ಆಗಬಹುದು. ಮೂಲೆಗೆ ಬಿದ್ದ ಉತ್ತಮ ಯೋಜನೆಗಳೂ ಕಾರ್ಯರೂಪಕ್ಕೆ ಬರಬಹುದು. ಇದರಿಂದ ಸಮಾಜಕ್ಕೆ ಒಳ್ಳೆಯದಾಗುತ್ತದೆ.

- ಹರೀಶ್ ಕುಮಾರ್ ಎಸ್., ಕೆ.ಎಂ.ದೊಡ್ಡಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.