ADVERTISEMENT

ಗುಣಮಟ್ಟದ ಶಿಕ್ಷಣ ಖಾತರಿಪಡಿಸಬೇಕು

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2022, 17:55 IST
Last Updated 6 ಡಿಸೆಂಬರ್ 2022, 17:55 IST

ರಾಜ್ಯದಲ್ಲಿ ನಾಯಿಕೊಡೆಗಳಂತೆ ವಿಶ್ವವಿದ್ಯಾಲಯಗಳು ತಲೆ ಎತ್ತುತ್ತಿವೆ. ಇದರಿಂದ ವಿದ್ಯಾರ್ಥಿಗಳಿಗೆ ಯಾವುದೇ ರೀತಿ ಅನನುಕೂಲ ಆಗದಂತೆ ನೋಡಿಕೊಳ್ಳಬೇಕಿದೆ. ನೂತನ ವಿಶ್ವವಿದ್ಯಾಲಯಗಳು ಗುಣಮಟ್ಟದ ಶಿಕ್ಷಣ ಖಾತರಿಪಡಿಸಲು ಯೋಜನೆಗಳನ್ನು ರೂಪಿಸಬೇಕಿದೆ ಮತ್ತು ಅಷ್ಟೇ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕಿದೆ. ಅಗತ್ಯ ಮೂಲಸೌಕರ್ಯವನ್ನು ಕಾಲಮಿತಿಯೊಳಗೆ ಕಲ್ಪಿಸುವ ಬದ್ಧತೆ ಬೇಕು. ಬೋಧಕರು ನೇಮಕವಾಗುವಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳ ಭವಿಷ್ಯಕ್ಕೆ ಯಾವುದೇ ರೀತಿ ಹಾನಿಯಾಗದಂತೆ ನೋಡಿಕೊಂಡಾಗ ಮಾತ್ರ ಹೊಸದಾಗಿ ವಿಶ್ವವಿದ್ಯಾಲಯ ಸ್ಥಾಪಿಸಿದ ಉದ್ದೇಶ ಈಡೇರಲಿದೆ.

⇒ಎಸ್‌. ಲಕ್ಷ್ಮಿನಾರಾಯಣ,ಶೃಂಗೇರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT