ADVERTISEMENT

ಅಸ್ಮಿತೆಗೆ ಕನ್ನಡ, ಅಗತ್ಯಕ್ಕೆ ಇಂಗ್ಲಿಷ್

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 25 ಡಿಸೆಂಬರ್ 2019, 19:45 IST
Last Updated 25 ಡಿಸೆಂಬರ್ 2019, 19:45 IST

‘ಶಾಲಾ ಹಂತದಲ್ಲಿ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಬೋಧನೆ ನಡೆಯಬೇಕು’ ಎಂದು ಕಾದಂಬರಿಕಾರ ಎಸ್.ಎಲ್.ಭೈರಪ್ಪ ಅವರು ಅಭಿಪ್ರಾಯಪಟ್ಟಿರುವುದು (ಪ್ರ.ವಾ., ಡಿ. 24) ಸರಿಯಾಗಿಯೇ ಇದೆ. 2007ರಿಂದಲೇ ಇಂಗ್ಲಿಷನ್ನು ಒಂದನೇ ತರಗತಿಯಿಂದ ಒಂದು ಭಾಷೆಯಾಗಿ ಕಲಿಸುವ ಕ್ರಮ ಜಾರಿಯಲ್ಲಿದೆ. ಇದರ ಜೊತೆಗೆ, ಪ್ರಸ್ತುತ ವರ್ಷದಿಂದ ಒಂದನೇ ತರಗತಿಯಿಂದಲೇ ಇಂಗ್ಲಿಷನ್ನು ಬೋಧನೆಯ ಮಾಧ್ಯಮವಾಗಿಸಲಾಗಿದೆ. ಇದು ಅನಗತ್ಯ ಆಗಿತ್ತು. ಪ್ರಾಥಮಿಕ ಹಂತದಲ್ಲಿ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳನ್ನು ಚೆನ್ನಾಗಿ ಕಲಿಸಿದರೆ, ವಿದ್ಯಾರ್ಥಿಗಳಿಗೆ ಮುಂದೆ ಭಾಷಾ ಮಾಧ್ಯಮ ಖಂಡಿತ ಸಮಸ್ಯೆಯಾಗುವುದಿಲ್ಲ.

ಈ ಸಂಬಂಧ ಯು.ಆರ್.ಅನಂತಮೂರ್ತಿ ಅವರು ಒಂದು ಕಡೆ ‘ಮೂಲಗ್ರಂಥವನ್ನು ಓದುವಷ್ಟು ಇಂಗ್ಲಿಷ್ ಭಾಷೆಯ ವ್ಯಾಕರಣವನ್ನು ವಿದ್ಯಾರ್ಥಿಗಳಿಗೆ ಕಲಿಸಬೇಕು. ಆದರೆ ಅವರು ಇಂಗ್ಲಿಷ್ ಸಾಹಿತ್ಯವನ್ನು ಓದಿ ಪಡೆದ ಅನುಭವವನ್ನು ತಮ್ಮ ಕನ್ನಡ ಭಾಷೆಯಲ್ಲಿಯೇ
ವ್ಯಕ್ತಪಡಿಸಲು ಅವಕಾಶ ಕಲ್ಪಿಸಬೇಕು’ ಎಂದಿದ್ದಾರೆ. ಈ ನಿಟ್ಟಿನಲ್ಲಿ ಭೈರಪ್ಪನವರ ಅಭಿಪ್ರಾಯ ಸಮಂಜಸವಾಗಿದೆ.

ಸಿ.ಚಿಕ್ಕತಿಮ್ಮಯ್ಯ ಹಂದನಕೆರೆ, ಬೆಂಗಳೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.