ADVERTISEMENT

ಸಂಗೀತ ಶಿಕ್ಷಕರನ್ನು ನೇಮಿಸಿ

​ಪ್ರಜಾವಾಣಿ ವಾರ್ತೆ
Published 26 ಜನವರಿ 2020, 19:45 IST
Last Updated 26 ಜನವರಿ 2020, 19:45 IST

ಸಂಗೀತವು ಮಾನಸಿಕ ಒತ್ತಡ ಕಡಿಮೆ ಮಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೆರವಾಗುತ್ತದೆ. ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸಂಗೀತ ಶಿಕ್ಷಕರ ಬಹಳಷ್ಟು ಹುದ್ದೆಗಳು ಖಾಲಿ ಇದ್ದರೂ ನೇಮಕಾತಿ ನಡೆದಿಲ್ಲ. ಸಂಗೀತ ವಿದ್ವತ್ ಪದವಿ ಹೊಂದಿದ ಅನೇಕ ಯುವಜನರು ನಿರುದ್ಯೋಗಿಗಳಾಗಿದ್ದಾರೆ. ಸರ್ಕಾರ ಇನ್ನಾದರೂ ಶಾಲೆಗಳಿಗೆ ಸಂಗೀತ ಶಿಕ್ಷಕರನ್ನು ನೇಮಿಸಿ, ಕಲೆಗೆ ಪ್ರೋತ್ಸಾಹ ನೀಡಬೇಕು. ಈ ಮೂಲಕ ನಿರುದ್ಯೋಗದ ಸಮಸ್ಯೆಯನ್ನು ಪರಿಹರಿಸಬೇಕು.

– ಶೀ. ಯಶವಂತ ಬಡಿಗೇರ,ಸಿಂದಗಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT