ADVERTISEMENT

ಕೊರೊನಾ ನಿಯಂತ್ರಣ: ಜಾಗೃತದಳ ಅಗತ್ಯ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 16 ಏಪ್ರಿಲ್ 2021, 19:31 IST
Last Updated 16 ಏಪ್ರಿಲ್ 2021, 19:31 IST

ಕೊರೊನಾ ಎರಡನೇ ಅಲೆ ನಿಯಂತ್ರಣದ ಸಲುವಾಗಿ ಸರ್ಕಾರವು ಜಾಗೃತದಳವೊಂದನ್ನು ನೇಮಿಸಬೇಕು. ಕೋವಿಡ್‌ ರೋಗಿಗಳನ್ನು ಇರಿಸಿರುವ ಎಲ್ಲ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಮೇಲೆ ಈ ದಳವು ನಿಗಾ ಇರಿಸಬೇಕು. ಜನರಿಗೆ ಸರಿಯಾಗಿ ಚಿಕಿತ್ಸೆ ದೊರೆಯುವುದನ್ನು ಖಾತರಿಪಡಿಸಿಕೊಳ್ಳಬೇಕು. ಜೊತೆಗೆ ಜಾಗೃತದಳವು ಜಾತ್ರೆ, ಸಭೆ-ಸಮಾರಂಭ, ಮದುವೆ ಮುಂತಾದ ಕಾರ್ಯಕ್ರಮಗಳ ಮೇಲೆ ಹದ್ದಿನ ಕಣ್ಣಿಟ್ಟು, ಕಠಿಣ ಕ್ರಮಗಳನ್ನು ಜರುಗಿಸಬೇಕು. ಈ ಮೂಲಕ ಸರ್ಕಾರದ ಆರ್ಥಿಕ ಸಂಪನ್ಮೂಲ ಹಾಗೂ ಜನರ ಜೀವ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸಬೇಕು.

- ಉಮೇಶ ಎಸ್. ಹಿರೇಮಠ, ಬೈಲಹೊಂಗಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT