ADVERTISEMENT

ಗ್ರಾಮ ವಾಸ್ತವ್ಯ: ಸಿಎಂ ಅಂತಃಕರಣದಿಂದ ಸ್ಪಂದಿಸಿ

​ಪ್ರಜಾವಾಣಿ ವಾರ್ತೆ
Published 21 ಜೂನ್ 2019, 19:45 IST
Last Updated 21 ಜೂನ್ 2019, 19:45 IST

ಹಿಂದೆ ಬಿಜೆಪಿ ಜೊತೆಗೂಡಿ ಸರ್ಕಾರ ರಚಿಸುವ ಮೂಲಕ ಆಕಸ್ಮಿಕವಾಗಿ ಮುಖ್ಯಮಂತ್ರಿಯಾದ ಎಚ್‌.ಡಿ.ಕುಮಾರಸ್ವಾಮಿ, ರಾಜಕೀಯ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿದ್ದರು. ಬಳಿಕ, ರಾಮಕೃಷ್ಣ ಹೆಗಡೆ ಕಾಲದ ಜನತಾ ದರ್ಶನ ಕಾರ್ಯಕ್ರಮ ಮುಂದುವರಿಸಿದ್ದರು. ಗ್ರಾಮ ವಾಸ್ತವ್ಯದಂತಹ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡು, ಜನರ ಮನೆ ಬಾಗಿಲಿಗೆ ತೆರಳಿದ ರಾಜ್ಯದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಕಾರಣರಾದರು.

ಪ್ರಸ್ತುತ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್‌ ಜೊತೆಗಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಒಂದು ವರ್ಷ ಕಳೆದು, ಲೋಕಸಭಾ ಚುನಾವಣಾ ಕಹಿ ಅನುಭವದ ನಂತರ ಮತ್ತೆ ಅವರು ಗ್ರಾಮ ವಾಸ್ತವ್ಯವನ್ನು ಮುಂದುವರಿಸಿದ್ದಾರೆ. ಕಾರಣ ಏನೇ ಇರಲಿ, ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಕುಮಾರಸ್ವಾಮಿ ಅವರು ಅಂತಃಕರಣಪೂರ್ವಕವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಆಗಲಿ.

– ಡಿ.ಪ್ರಸನ್ನ ಕುಮಾರ್,ಬೆಂಗಳೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.