ADVERTISEMENT

ಮೌಲ್ಯಾಂಕನ ಪರೀಕ್ಷೆ ಸ್ವಾಗತಾರ್ಹ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 3 ಫೆಬ್ರುವರಿ 2020, 13:32 IST
Last Updated 3 ಫೆಬ್ರುವರಿ 2020, 13:32 IST

ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ 7ನೇ ತರಗತಿಗೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಾಮಾನ್ಯ ಮೌಲ್ಯಾಂಕನ ಪರೀಕ್ಷೆ, ಮಕ್ಕಳ ಏಳಿಗೆಗೆ ಸಹಕಾರಿ. ಫೆ. 5ರ ಒಳಗೆ ವಿದ್ಯಾರ್ಥಿಗಳ ಸಂಖ್ಯೆ, ಕಲಿಕಾ ಮಾಧ್ಯಮ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಸ್ಯಾಟ್ಸ್ ತಂತ್ರಾಂಶದ ಮೂಲಕ ಅಪ್‌ಲೋಡ್ ಮಾಡಲು ಸೂಚನೆ ನೀಡಿರುವುದು ಒಳ್ಳೆಯ ಬೆಳವಣಿಗೆ. ಒಂದುವೇಳೆ ವಿದ್ಯಾರ್ಥಿಗಳ ಮಾಹಿತಿ ತಪ್ಪಿಹೋದರೆ ಅದಕ್ಕೆ ಶಾಲೆ ಮತ್ತು ಶಿಕ್ಷಕರೇ ಹೊಣೆಯಾಗಲಿದ್ದಾರೆ ಎಂದು ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಇದು ಬೇಸರ ಮೂಡಿಸುವ ಸಂಗತಿ. ಯಾವ ವಿಷಯದಲ್ಲಿ ವಿದ್ಯಾರ್ಥಿ ಹಿಂದುಳಿದಿರುತ್ತಾನೋ ಅ ವಿಷಯಕ್ಕೆ 8ನೇ ತರಗತಿಯಿಂದ ಹೆಚ್ಚಿನ ಪ್ರಾಮುಖ್ಯ ನೀಡಿ, ತರಬೇತಿ ಕೊಡುವುದೇ ಈ ಪರೀಕ್ಷೆಯ ಉದ್ದೇಶವಾಗಿರುವುದರಿಂದ, ವಿದ್ಯಾರ್ಥಿಗಳ ತೇರ್ಗಡೆಗೆ ಸಹಕಾರಿಯಾಗುತ್ತದೆ.

ವಿಜಯ್‌ಕುಮಾರ್ ಎಚ್.ಕೆ., ರಾಯಚೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT