ADVERTISEMENT

ವಾಚಕರ ವಾಣಿ | ಆನ್‌ಲೈನ್ ಮದ್ಯ ಮಾರಾಟಕ್ಕೆ ಅಡ್ಡಿ ಏಕೆ?

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2020, 19:30 IST
Last Updated 10 ಆಗಸ್ಟ್ 2020, 19:30 IST

ರಾಜ್ಯದ ನಗರ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ನಿಗದಿತ ಬೆಲೆಗೆ ಮದ್ಯ ಮಾರಾಟ ಮಾಡುವ ಅಂಗಡಿಗಳಿವೆ. ತಾಲ್ಲೂಕು ಹಾಗೂ ಪಟ್ಟಣ ಪ್ರದೇಶಗಳಲ್ಲಿ ಇಂತಹ ಅಂಗಡಿಗಳಿಲ್ಲ. ಇನ್ನು ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಸಾಧ್ಯವಿಲ್ಲವಾಗಿದೆ. ಏಕೆಂದರೆ, ಮದ್ಯದ ಅಂಗಡಿಗಳ ಮಾಲೀಕರೇ ಜನರನ್ನು ಪ್ರಚೋದಿಸಿ ಅಕ್ರಮ ಮದ್ಯ ಮಾರಾಟಕ್ಕೆ ಅನುಕೂಲ ಮಾಡಿಕೊಡುತ್ತಿದ್ದಾರೆ. ಪರಿಸ್ಥಿತಿ ಹೀಗಿರುವಾಗ, ಯಾವ ರೀತಿಯಿಂದ ನೋಡಿದರೂ ಶ್ರೀಸಾಮಾನ್ಯರಿಗೆ ಆರ್ಥಿಕ ಹೊರೆಯಾಗುತ್ತಿದೆ. ಹೀಗಿರುವಾಗ ಆನ್‌ಲೈನ್ ಮದ್ಯ ಮಾರಾಟ ಜಾರಿಯಾದಲ್ಲಿ ಹೆಚ್ಚಿನ ಬೆಲೆಗೆ ಮಾರಾಟವಾಗುವುದು ನಿಯಂತ್ರಣಕ್ಕೆ ಬರುತ್ತದೆ. ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸುವವರ ಸಂಖ್ಯೆ ಸಹ ಕಡಿಮೆಯಾಗುತ್ತದೆ.

ಅಬಕಾರಿ ಇಲಾಖೆ ಗಳಿಸುತ್ತಿರುವುದಕ್ಕಿಂತ ಹೆಚ್ಚಿನ ಲಾಭವನ್ನು ಮದ್ಯ ಮಾಫಿಯಾ ಗಳಿಸುತ್ತಿದೆ. ಇದಕ್ಕೆಲ್ಲ ಸ್ವಲ್ಪ ಮಟ್ಟಿನ ನಿಯಂತ್ರಣ ಬೇಕೆಂದರೆ, ಆನ್‌ಲೈನ್ ಮದ್ಯ ಮಾರಾಟ ಜಾರಿಯಾಗಬೇಕಿದೆ.

-ತಿಮ್ಮೇಶ ಮುಸ್ಟೂರು, ಜಗಳೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.