ADVERTISEMENT

ಯಾಕೆ ಹಿಂದೇಟು?

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2018, 19:24 IST
Last Updated 5 ಆಗಸ್ಟ್ 2018, 19:24 IST

ಯಾಕೆ ಹಿಂದೇಟು?

‘ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಸಿಬಿಯನ್ನು ರದ್ದು ಮಾಡಿ, ಲೋಕಾಯುಕ್ತ ಸಂಸ್ಥೆಯನ್ನು ಬಲಗೊಳಿಸುತ್ತೇವೆ’ ಎಂದು ಚುನಾವಣೆಗೂ ಮುನ್ನ ಬಿಡುಗಡೆ ಮಾಡಿದ್ದ ಜೆಡಿಎಸ್‌ ಪ್ರಣಾಳಿಕೆಯಲ್ಲಿ ಹೇಳಲಾಗಿತ್ತು. ಸ್ವಂತ ಬಲದಿಂದ ಅಲ್ಲವಾದರೂ ಜೆಡಿಎಸ್ ಪಕ್ಷವೇ ಈಗ ಸರ್ಕಾರದ ಚಾಲಕನ ಸ್ಥಾನದಲ್ಲಿದೆ.

2018–19ನೇ ಸಾಲಿನ ಬಜೆಟ್ ಮಂಡಿಸುವಾಗಲಾದರೂ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಲೋಕಾಯುಕ್ತ ಬಲವರ್ಧನೆಯ ವಿಚಾರ ಪ್ರಸ್ತಾಪಿಸುತ್ತಾರೆಂದು ನಿರೀಕ್ಷಿಸಲಾಗಿತ್ತು. ಆದರೆ ಅವರು ಆ ವಿಚಾರವನ್ನೇ ಮರೆತಂತಿದೆ. ಲೋಕಾಯುಕ್ತ ಸಂಸ್ಥೆಯ ಬಲವರ್ಧನೆಗೆ ಕ್ರಮ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿರುವುದೇಕೆ?

ADVERTISEMENT

ಎ.ಬಿ. ಪುಟ್ಟರಾಜ್, ಹುಣಸೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.