ADVERTISEMENT

ಈ ರೀತಿಯ ತಾರತಮ್ಯವೇಕೆ?

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2022, 19:45 IST
Last Updated 2 ನವೆಂಬರ್ 2022, 19:45 IST

ಕರ್ನಾಟಕ ರಾಜ್ಯೋತ್ಸವದ ಪ್ರಶಸ್ತಿ ಮೊತ್ತವನ್ನು ರಾಜ್ಯ ಸರ್ಕಾರವು ₹ 1 ಲಕ್ಷದಿಂದ ₹ 5 ಲಕ್ಷಕ್ಕೆ ಏರಿಸಿರುವುದೇನೊ ಸರಿ. ಆದರೆ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ರಾಜ್ಯೋತ್ಸವದ ನಿಮಿತ್ತ ಗೌರವಿಸಲಾಗುವ ವಿವಿಧ ಕ್ಷೇತ್ರಗಳ ಸಾಧಕರಿಗೆ ಕನಿಷ್ಠ ಪ್ರಶಸ್ತಿ ಮೊತ್ತವನ್ನೂ ನೀಡದೆ ಶಾಲು, ಪೇಟ, ಹಾರ, ಹಣ್ಣು, ಪ್ರಶಸ್ತಿ ಪತ್ರ, ಸ್ಮರಣಿಕೆಯನ್ನಷ್ಟೇ ನೀಡಿ ಕೈ ತೊಳೆದುಕೊಳ್ಳುತ್ತಿರುವುದು ಎಷ್ಟರಮಟ್ಟಿಗೆ ಸರಿ?

ದೊಡ್ಡ ಮೊತ್ತ ನೀಡಲಾಗದಿದ್ದರೂ ಜಿಲ್ಲಾ ಮತ್ತು ತಾಲ್ಲೂಕು ಹಂತಕ್ಕೆ ಹೊಂದಿಕೆಯಾಗುವಂತೆ ಒಂದಿಷ್ಟಾದರೂ ಗೌರವಯುತವಾಗಿ ಪ್ರಶಸ್ತಿ ಮೊತ್ತವನ್ನು ನೀಡಿದರೆ, ಸಾಧಕರನ್ನು ಇನ್ನಷ್ಟು ಗೌರವಯುತವಾಗಿ ನಡೆಸಿಕೊಂಡಂತೆ ಆಗುತ್ತದೆ.

- ಸಮುದ್ರವಳ್ಳಿ ವಾಸು, ಹಾಸನ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.