ADVERTISEMENT

ಉತ್ತರ ಕರ್ನಾಟಕ ಏಕೆ ನೆನಪಾಗಲಿಲ್ಲ?

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2018, 20:17 IST
Last Updated 20 ನವೆಂಬರ್ 2018, 20:17 IST

ಹಾಸನ ಜಿಲ್ಲೆಯಲ್ಲಿ ಇನ್ನೊಂದು ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು ಮತ್ತು ಒಂದು ಪಾಲಿಟೆಕ್ನಿಕ್ ಆರಂಭಿಸಲು ಸಚಿವ ಸಂಪುಟ ಸಭೆ ಸಮ್ಮತಿ ಸೂಚಿಸಿದ್ದು ವರದಿಯಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡರ ತವರು ಜಿಲ್ಲೆ ಹಾಸನ. ಆ ಜಿಲ್ಲೆಗೆ ಹೊಸ ಕಾಲೇಜುಗಳನ್ನು ಮಂಜೂರು ಮಾಡಿದ್ದು ದೊಡ್ಡ ವಿಷಯವೇನಲ್ಲ. ಆದರೆ ಕರ್ನಾಟಕದ ಉತ್ತರ ಭಾಗ ಈ ಸರ್ಕಾರಕ್ಕೆ ಈಗಲೂ ನೆನಪಿಗೆ ಬರಲಿಲ್ಲವಲ್ಲ ಎಂಬುದು ಬೇಸರದ ವಿಷಯ.

ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಿಂದುಳಿದಿರುವ ಉತ್ತರ ಕರ್ನಾಟಕ, ಅದರಲ್ಲೂ ಹೈದರಾಬಾದ್‌ ಕರ್ನಾಟಕ ಭಾಗದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಬಹುದಾಗಿತ್ತು. ರಾಜ್ಯದ ಒಟ್ಟು 11 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಏಳು ಕಾಲೇಜುಗಳು ದಕ್ಷಿಣ ಭಾಗದಲ್ಲೇ ಇವೆ. ಶೈಕ್ಷಣಿಕವಾಗಿ ಹಾಗೂ ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಯಾದಗಿರಿಯಂತಹ ಜಿಲ್ಲೆಗಳಲ್ಲಿ ಒಂದೇ ಒಂದು ಸರ್ಕಾರಿ ಪಾಲಿಟೆಕ್ನಿಕ್, ಎಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣ ಕಾಲೇಜು ಇಲ್ಲ. ಹಿಂದುಳಿದ ಈ ಭಾಗದ ವಿದ್ಯಾರ್ಥಿಗಳು ಖಾಸಗಿ ಕಾಲೇಜುಗಳಲ್ಲಿ ಅಭ್ಯಸಿಸುವಷ್ಟು ಸ್ಥಿತಿವಂತರಲ್ಲ ಎಂಬುದು ಸರ್ಕಾರಕ್ಕೆ ಗೊತ್ತಿರದ ವಿಚಾರವೇ?

ಬೆನಕನಹಳ್ಳಿ ಶೇಖರಗೌಡ, ಬೆಂಗಳೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.