ADVERTISEMENT

ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 14 ಜೂನ್ 2013, 19:59 IST
Last Updated 14 ಜೂನ್ 2013, 19:59 IST
ಕೋಣಸಾಲೆ ನರಸರಾಜು, ರೈತ ಸಂಘ, ಮಂಡ್ಯ ಜಿಲ್ಲಾ ಘಟಕ ಅಧ್ಯಕ್ಷ
ಕೋಣಸಾಲೆ ನರಸರಾಜು, ರೈತ ಸಂಘ, ಮಂಡ್ಯ ಜಿಲ್ಲಾ ಘಟಕ ಅಧ್ಯಕ್ಷ   

ರಾಜ್ಯದ ಯಾವುದೇ ನೀರಾವರಿ ಯೋಜನೆ ಸಕಾಲದಲ್ಲಿ ಪೂರ್ಣವಾಗುತ್ತಿಲ್ಲ. ಯೋಜನೆ ಆರಂಭಿಸುವಾಗ ಇದ್ದ ಉತ್ಸಾಹ ಬಳಿಕ ಮರೆಯಾಗುತ್ತಿದೆ. ಇದರಿಂದಾಗಿ ರೈತರಿಗೂ ಲಾಭ ಪೂರ್ಣ ಪ್ರಮಾಣದಲ್ಲಿ ಸಿಗುತ್ತಿಲ್ಲ.

ಬಜೆಟ್‌ನಲ್ಲಿ ನೀರಾವರಿ ಉದ್ದೇಶಕ್ಕೆ ಸಾಕಷ್ಟು ಹಣ ಮೀಸಲಿಟ್ಟರೂ ಆ ಹಣವನ್ನು ನಿಗದಿತ ಕಾಲಾವಧಿಯಲ್ಲಿ ಖರ್ಚು ಮಾಡಿ, ಕಾಮಗಾರಿ ಪೂರ್ಣಗೊಳಿಸುವ ಕೆಲಸ ಆಗುತ್ತಿಲ್ಲ. ಹಾಗಾಗಿ, ಯೋಜನಾ ಗಾತ್ರವೂ ಹೆಚ್ಚುತ್ತಾ ಹೋಗುತ್ತಿದ್ದು ಹೊರೆಯಾಗುತ್ತಿದೆ. ನಿರ್ದಿಷ್ಟ ಕಾಲಾವಧಿ ಗೊತ್ತುಪಡಿಸಿ, ವರ್ಷಕ್ಕೆ ಇಂತಿಷ್ಟು ಹಣ ನೀಡಬೇಕು. ಆ ಮೂಲಕ ನೀರಾವರಿ ಯೋಜನೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಅಲ್ಲದೇ, ಕಡೇ ಭಾಗದ ಜಮೀನಿಗೂ ನೀರು ತಲುಪುವಂತೆ ನೋಡಿಕೊಳ್ಳಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.