ADVERTISEMENT

ವಿಶೇಷ ಪ್ಯಾಕೇಜ್ ನೀಡಿ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2013, 19:59 IST
Last Updated 2 ಆಗಸ್ಟ್ 2013, 19:59 IST

ಮೂರು ದಶಕಗಳಿಂದ ಆಟೊಮೊಬೈಲ್ ಬಿಡಿಭಾಗಗಳ ತಯಾರಿಕೆ ಹಾಗೂ ಫೌಂಡ್ರಿ ಉದ್ಯಮದಲ್ಲಿ ಮುಂಚೂಣಿಯಲ್ಲಿದ್ದ ಬೆಳಗಾವಿಯ ಕೈಗಾರಿಕಾ ವಲಯ ಆರ್ಥಿಕ ಹಿಂಜರಿತದ ಪರಿಣಾಮದಿಂದ ಸಂಕಷ್ಟಕ್ಕೀಡಾಗಿದೆ. ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಲ್ಲಿ ಶೇ 90ರಷ್ಟು ಉದ್ಯಮಗಳು ಮುಚ್ಚುವ ಹಂತ ತಲುಪಿವೆ.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಪುನಶ್ಚೇತನಕ್ಕಾಗಿ ಸರ್ಕಾರ ಕಾರ್ಯಕ್ರಮ ರೂಪಿಸಬೇಕು. ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಬೇಕು. ರೈಲ್ವೆ, ಎಚ್‌ಎಎಲ್, ಬಿಇಎಂಎಲ್‌ನಂಥ ದೊಡ್ಡ ಸಾರ್ವಜನಿಕ ಉದ್ಯಮಗಳು ಬಿಡಿ ಭಾಗಗಳ ತಯಾರಿಕೆಗೆ ಸಣ್ಣ ಕೈಗಾರಿಕೆಗಳಿಗೆ ಕೆಲಸ ನೀಡಬೇಕು.

ಇದರಿಂದ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿದಂತಾಗುತ್ತದೆ. ಕನಿಷ್ಠ ನಾಲ್ಕೈದು ದೊಡ್ಡ ಕೈಗಾರಿಕೆಗಳು ಬೆಳಗಾವಿಗೆ ಬರಬೇಕು. ದೊಡ್ಡ ಕೈಗಾರಿಕೆಗಳು ಬರುವ ರೀತಿಯಲ್ಲಿ ವಾತಾವರಣ ನಿರ್ಮಾಣ ಮಾಡುವ ಅಗತ್ಯವಿದೆ
- ಬಸವರಾಜ ಜವಳಿ, ಸಣ್ಣ ಕೈಗಾರಿಕೆಗಳ ಉದ್ದಿಮೆದಾರರ ಸಂಘದ ಅಧ್ಯಕ್ಷ .

ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಉತ್ತೇಜನಕ್ಕೆ ವಿಶೇಷ ಪ್ಯಾಕೇಜ್ ನೀಡಬೇಕು.ತೆರಿಗೆ ವಿನಾಯಿತಿ ನೀಡುವುದೂ ಅವಶ್ಯ.
- ಸತೀಶ ತೆಂಡೋಲ್ಕರ್, ಬೆಳಗಾವಿ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ .

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.