
ಸಾಂದರ್ಭಿಕ ಚಿತ್ರ
ರಾಜ್ಯ ಸರ್ಕಾರ ರೈತ ಮಕ್ಕಳಿಗಾಗಿ ರೂಪಿಸಿರುವ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಿದೆ. ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ರೈತರ ಮಕ್ಕಳಿಗೆ ಉನ್ನತ ಶಿಕ್ಷಣ ಮುಂದುವರಿಸಲು ವಿದ್ಯಾರ್ಥಿವೇತನ ಸೌಲಭ್ಯ ಕಲ್ಪಿಸಲಾಗಿದೆ. ಈ ಯೋಜನೆಯಡಿ ರಾಜ್ಯದ ಎಲ್ಲಾ ರೈತ ಮಕ್ಕಳು ಅರ್ಹತೆಯ ಆಧಾರದಲ್ಲಿ ಅರ್ಜಿ ಸಲ್ಲಿಸಬಹುದು.
ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ? ಇರಬೇಕಾದ ಅರ್ಹತೆಗಳೇನು? ಎಂಬ ಮಾಹಿತಿಯನ್ನು ತಿಳಿಯೋಣ.
ಯಾರು ಅರ್ಜಿ ಸಲ್ಲಿಸಬಹುದು?
ರಾಜ್ಯದಲ್ಲಿರುವ ಎಲ್ಲಾ ರೈತ ಮಕ್ಕಳು ಈ ಯೋಜನೆಯನ್ನು ಪಡೆಯಲು ಅರ್ಹರಾಗಿರುತ್ತಾರೆ.
ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು
ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳ ವಿದ್ಯಾರ್ಥಿಗಳು
ಎಸ್ಎಸ್‌ಎಲ್‌ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅಗತ್ಯ ದಾಖಲಾತಿಗಳೇನು?
ಶಾಲೆ ಅಥವಾ ಕಾಲೇಜುಗಳ ಪ್ರಮಾಣಪತ್ರ
ಕುಟುಂಬದ ಆದಾಯ ಪ್ರಮಾಣ ಪತ್ರ ಮತ್ತು ಹಿನ್ನೆಲೆ ಪರಿಶೀಲನೆ
ವಿದ್ಯಾರ್ಥಿಯ ಪೋಷಕರು ರೈತರಾಗಿರುವುದನ್ನು ಖಚಿತಪಡಿಸಿಕೊಳ್ಳುವುದು
ಪೋಷಕರ ಹೆಸರಿನಲ್ಲಿ ಕೃಷಿಭೂಮಿ ಇರುವುದರ ಪರಿಶೀಲನೆ
'fruits' ಪೋರ್ಟಲ್ ಪರಿಶೀಲನೆ
ರೈತರ (farmer ID) ಪರಿಶೀಲನೆ
ಭೂಮಿ ವಿವರಗಳನ್ನು 'fruits' ಡೇಟಾಬೇಸ್‌ಗೆ ಹೊಂದಾಣಿಕೆ
ಅನುಮೋದನೆ ಹೇಗೆ?
ಮೇಲಿನ ಎಲ್ಲಾ ಮಾನದಂಡಗಳನ್ನು ಪೂರೈಸಿದ ಬಳಿಕ ಅರ್ಜಿಯನ್ನು ಅನುಮೋದನೆಗೊಳಿಸಲಾಗುತ್ತದೆ. ಬಳಿಕ ವಿದ್ಯಾರ್ಥಿ ನಿಧಿಯ ಮೊತ್ತ ನೇರವಾಗಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುತ್ತದೆ ಎಂದು ಇಲಾಖೆ ತಿಳಿಸಿದೆ.
2025ರ ವರದಿ ಪ್ರಕಾರ ವಿದ್ಯಾರ್ಥಿವೇತನದ ಪ್ರೋತ್ಸಾಹಧನದ ಪಟ್ಟಿ
https://ssp.postmatric.karnataka.gov.inಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ. ಅಲ್ಲಿ ನಿಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ತರಗತಿಯನ್ನು ಆಯ್ಕೆ ಮಾಡಿರಿ. ಬಳಿಕ ಖಾತೆಯನ್ನು ರಚಿಸಿ. ಅಲ್ಲಿ ಕೇಳಲಾದ ವಿವರಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.