ADVERTISEMENT

‘ಅತ್ಯಾಧುನಿಕ ಮೂಲಸೌಕರ್ಯದ ಅಗತ್ಯವಿದೆ’

ಪಿಟಿಐ
Published 14 ಏಪ್ರಿಲ್ 2018, 19:30 IST
Last Updated 14 ಏಪ್ರಿಲ್ 2018, 19:30 IST
ಹರಭಜನ್‌ ಸಿಂಗ್‌
ಹರಭಜನ್‌ ಸಿಂಗ್‌   

ಚಂಡೀಗಡ: ‘ಕ್ರೀಡೆಗೆ ಸಂಬಂಧಿಸಿದಂತೆ ಪಂಜಾಬ್‌ನಲ್ಲಿ ಪ್ರತಿಭೆಗಳಿಗೇನೂ ಕಮ್ಮಿಯಿಲ್ಲ. ಆದರೆ, ಅವರಿಗೆಲ್ಲ ಅತ್ಯಾಧುನಿಕ ಮೂಲ ಸೌಕರ್ಯ ಕಲ್ಪಿಸಿ ಹೆಚ್ಚಿನ ಸೌಲಭ್ಯಗಳನ್ನು ನೀಡಬೇಕಿದೆ’ ಎಂದು ಕ್ರಿಕೆಟಿಗ ಹರಭಜನ್‌ ಸಿಂಗ್‌ ಹೇಳಿದ್ದಾರೆ.

ಶನಿವಾರ ನಡೆದ ಹಿರಿಯ ಕ್ರಿಕೆಟಿಗ ರೀತಿಂದರ್‌ ಸೋಧಿ ಅವರ ಕ್ರಿಕೆಟ್‌ ಅಕಾಡೆಮಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇತ್ತೀಚಿನ ದಿನಗಳಲ್ಲಿ ಮಕ್ಕಳು ಹೋರಾಂಗಣ ಆಟಗಳಲ್ಲಿ ಹೆಚ್ಚು ಪಾಲ್ಗೊಳ್ಳುತ್ತಿಲ್ಲ. ಹಾಗಾಗಿ, ಅವರಿಗೆ ಉತ್ತೇಜನ ನೀಡುವ ಅಗತ್ಯವಿದೆ. ಕ್ರೀಡೆಗೆ ಸಂಬಂಧಿಸಿದಂತೆ ಪಂಜಾಬ್‌ನಲ್ಲಿ ಹೇಳಿಕೊಳ್ಳುವಂತಹ ಮೂಲಸೌಕರ್ಯಗಳಿಲ್ಲ. ಆದ್ದರಿಂದ ಇಂತಹ ಕ್ರೀಡಾ ಅಕಾಡೆಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆರಂಭವಾಗಬೇಕು’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.