ಜೈಪುರ (ಪಿಟಿಐ): ರಾಜಸ್ತಾನ ರಾಯಲ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಅಸಭ್ಯ ಪದ ಬಳಸಿದ ಡೆಕ್ಕನ್ ಚಾರ್ಜರ್ಸ್ ಹೈದರಾಬಾದ್ ತಂಡದ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ ಅವರಿಗೆ ಎಚ್ಚರಿಕೆ ನೀಡಲಾಗಿದೆ.
ಮಿಶ್ರಾ ಅಸಭ್ಯ ಪದ ಬಳಸುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಹಾಗಾಗಿ ಅವರಿಗೆ ಛೀಮಾರಿ ಕೂಡ ಹಾಕಲಾಗಿದೆ. `ಮಿಶ್ರಾ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ~ ಎಂದು ಐಪಿಎಲ್ ಸಂಘಟಕರು ತಿಳಿಸಿದ್ದಾರೆ.
ಈ ಪಂದ್ಯದಲ್ಲಿ ಡೆಕ್ಕನ್ ಚಾರ್ಜರ್ಸ್ ಸೋಲು ಕಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.