ADVERTISEMENT

ಅ.30ರಂದು ಮೊದಲ ಅಭ್ಯಾಸ ಕ್ರಿಕೆಟ್ ಪಂದ್ಯ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2012, 19:30 IST
Last Updated 19 ಅಕ್ಟೋಬರ್ 2012, 19:30 IST

ಮುಂಬೈ (ಪಿಟಿಐ): ಟೆಸ್ಟ್, ಟ್ವೆಂಟಿ-20 ಹಾಗೂ ಏಕದಿನ ಕ್ರಿಕೆಟ್ ಸರಣಿಯನ್ನಾಡಲು ಭಾರತಕ್ಕೆ ಆಗಮಿಸಲಿರುವ ಇಂಗ್ಲೆಂಡ್ ಕ್ರಿಕೆಟ್ ತಂಡ ಅಕ್ಟೋಬರ್ 30ರಂದು ಮುಂಬೈಯಲ್ಲಿ ಮೊದಲ ಅಭ್ಯಾಸ ಪಂದ್ಯವನ್ನು ಆಡಲಿದೆ.

 ನವೆಂಬರ್ 3ರಿಂದ 5ರ ವರೆಗೆ ಎರಡನೇ ಅಭ್ಯಾಸ ಪಂದ್ಯ ಮುಂಬೈಯ ಡಾ. ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲು ನಿಗದಿಯಾಗಿದ್ದ ಪ್ರಕಾರ ಈ ಪಂದ್ಯ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ) ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಭದ್ರತೆಯ ಕಾರಣದಿಂದ ಪೊಲೀಸರು ನೀಡಿದ ಸಲಹೆಯಂತೆ ಈ ಪಂದ್ಯವನ್ನು ಬೇರೆ ಕ್ರೀಡಾಂಗಣಕ್ಕೆ ಬಿಸಿಸಿಐ ಸ್ಥಳಾಂತರ ಮಾಡಿದೆ.

ಮೊದಲ ಹಾಗೂ ಎರಡನೇ ಅಭ್ಯಾಸ ಪಂದ್ಯಗಳು ಕ್ರಮವಾಗಿ ಭಾರತ `ಎ~ ಹಾಗೂ ಬೋರ್ಡ್ ಪ್ರೆಸಿಡೆಂಟ್ ಇಲೆವೆನ್ ವಿರುದ್ಧ ನಡೆಯುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. 

 ಮೂರನೇ ಹಾಗೂ ಕೊನೆಯ ಅಭ್ಯಾಸ ಪಂದ್ಯ ಅಹಮದಾಬಾದ್‌ನಲ್ಲಿ ನವೆಂಬರ್ 8ರಿಂದ 11ರ ವರೆಗೆ ಜರುಗಲಿದೆ. ಇದೇ ಕ್ರೀಡಾಂಗಣದಲ್ಲಿ ಮೊದಲ ಟೆಸ್ಟ್ ಕೂಡಾ ಆಯೋಜನೆಯಾಗಿದೆ.

 ರಾಂಚಿ ವರದಿ (ಐಎಎನ್‌ಎಸ್):
ನಾಯಕ ದೋನಿ ತವರೂರು ರಾಂಚಿಯಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ ಮೂರನೇ ಏಕದಿನ ಪಂದ್ಯ ನಡೆಯಲಿದೆ. 

 ಅಂತರರಾಷ್ಟ್ರೀಯ ದರ್ಜೆಯ ಸೌಲಭ್ಯಗಳನ್ನು ಹೊಂದಿರುವ ಈ ನೂತನ ಕ್ರೀಡಾಂಗಣದಲ್ಲಿ ಭಾರತ ಆಡಲಿರುವ ಮೊದಲ ಪಂದ್ಯ ಇದಾಗಿದೆ. ಈ ಪಂದ್ಯ ಜನವರಿ 19ರಂದು ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.